
ಪ್ರಜಾವಾಣಿ ವಾರ್ತೆ
ಲಾರಿ ಪಲ್ಟಿ
ಕಾರ್ಕಳ (ಉಡುಪಿ ಜಿಲ್ಲೆ): ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿಯಾಗಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟ ಘಟನೆ ತಾಲ್ಲೂಕಿನ ನಿಟ್ಟೆ ಗ್ರಾಮದಲ್ಲಿ ಶನಿವಾರ ನಡೆದಿದೆ.
ನರಿಯಪ್ಪ (26) ಹಾಗೂ ಮರಿಯಪ್ಪ (22) ಮೃತಪಟ್ಟವರು.
ನಿಟ್ಟೆ ಬಳಿಯ ಮರಿ ಪರಪು ಎಂಬಲ್ಲಿ ಕಲ್ಲುಗಳನ್ನು ತುಂಬಿಕೊಂಡು ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡು ಲಾರಿ ಪಲ್ಟಿಯಾಗಿ ದುರಂತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.