ADVERTISEMENT

ನಾಟಕ ಪ್ರದರ್ಶನ, ಚರ್ಚಾಗೋಷ್ಠಿ, ಭಾವಗೀತೆ ಸ್ಪರ್ಧೆ

ತುಳುಕೂಟದಿಂದ ಕೆಮ್ತೂರು ದೊಡ್ಡಣ್ಣಶೆಟ್ಟಿ ಸ್ಮರಣಾರ್ಥ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2021, 16:21 IST
Last Updated 11 ಮಾರ್ಚ್ 2021, 16:21 IST

ಉಡುಪಿ: ತುಳುಕೂಟ ಉಡುಪಿ ಸಂಸ್ಥೆಯಿಂದ ಹಿರಿಯ ನಾಟಕಕಾರ, ಸ್ವಾತಂತ್ರ್ಯ ಹೋರಾಟಗಾರ ಕೆಮ್ತೂರು ದೊಡ್ಡಣ್ಣಶೆಟ್ಟಿ ಸ್ಮರಣಾರ್ಥ ಮಾರ್ಚ್‌ 14ರಂದು ತುಳು ನಾಟಕ ಪ್ರದರ್ಶನ, ಚರ್ಚಾಗೋಷ್ಠಿ, ಭಾವಗೀತೆ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ತುಳುಕೂಟದ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 14ರಂದು ಬೆಳಿಗ್ಗೆ 9ಕ್ಕೆ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿನಿಟ್ಟೂರು ಸಂಜೀವ ಭಂಡಾರಿ ಸ್ಮರಣಾರ್ಥ ತುಳು ಭಾವಗೀತೆ ಸ್ಪರ್ಧೆ ನಡೆಯಲಿದ್ದು, ಕಾಪು ತಾಲ್ಲೂಕು ಕಸಾಪ ಅಧ್ಯಕ್ಷ ಪುಂಡಲೀಕ ಮರಾಠೆ ಉದ್ಘಾಟಿಸಲಿದ್ದಾರೆ. ತುಳುಕೂಟದ ಸದಸ್ಯ ಪ್ರಕಾಶ್ ಸುವರ್ಣ ಕಟಪಾಡಿ ಅವರ ತುಳು ಭಕ್ತಿ ಹಾಗೂ ಭಾವಗೀತೆ ‘ಬೊಲ್ಪು’ ಕೃತಿಯನ್ನು ಶಿರ್ವ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ.ವೈ.ಭಾಸ್ಕರ್‌ಶೆಟ್ಟಿ ಬಿಡುಗಡೆ ಮಾಡಲಿದ್ದಾರೆ ಎಂದರು.

ಮಧ್ಯಾಹ್ನ 2ಕ್ಕೆ ತುಳು ನಾಟಕ ರಂಗಭೂಮಿ ಕೋಡೆ–ಇನಿ–ಎಲ್ಲೆ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ. ರಂಗಕರ್ಮಿ ಎಂ.ಎಸ್‌.ಭಟ್‌, ರಂಗ ನಿರ್ದೇಶಕ ವಿಜಯ್‌ಕುಮಾರ್ ಕೋಡಿಯಾಲ್‌ಬೈಲ್‌, ಕ್ರಿಸ್ಟೋಫರ್ ಮಂಗಳೂರು ಭಾಗವಹಿಸಲಿದ್ದಾರೆ.

ADVERTISEMENT

ಸಂಜೆ 5.30ಕ್ಕೆ ರವೀಂದ್ರ ಕಲಾಮಂಟಪದಲ್ಲಿ ಕೆಮ್ತೂರು ದೊಡ್ಡಣ್ಣ ಶೆಟ್ಟಿ ಸ್ಮರಣೆ ಕಾರ್ಯಕ್ರಮವನ್ನು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್‌.ಯಡಪಡಿತ್ತಾಯ ಉದ್ಘಾಟಿಸಲಿದ್ದಾರೆ. ಶಾಸಕ ರಘುಪತಿ ಭಟ್‌, , ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ್ ಜಿ.ಕತ್ತಲ್‌ಸಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಎಂಜಿಎಂ ಕಾಲೇಜು ಪ್ರಾಂಶುಪಾಲ ಡಾ.ದೇವಿದಾಸ್ ನಾಯ್ಕ್ ಭಾಗವಹಿಸಲಿದ್ದಾರೆ ಎಂದು ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.

ತುಳುಕೂಟದ ಕಾರ್ಯದರ್ಶಿ ಗಂಗಾಧರ್ ಕಿದಿಯೂರು ಅವರ ತುಳುಲಿಪಿಯಲ್ಲಿ ಬರೆದ ಪಿಂಗಾರದ ಬಾಲೆ ಸಿರಿ ಕೃತಿ ಬಿಡುಗಡೆ ನಡೆಯಲಿದೆ. ಕಾರ್ಯಕ್ರಮದಲ್ಲಿ ತುಳುಮಿನದನ ವರ್ಚುವಲ್ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ, ಭಾವಗೀತೆ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿ ವಿತರಣೆ ನಡೆಯಲಿದೆ. ವಿಜಯ್‌ಕುಮಾರ್ ಕೊಡಿಯಲಾಲ್‌ಬೈಲ್ ಅವರ ವಿಧಾತ್ರಿ ಕಲಾವಿದರೆ ಕೈಕಂಬ ಅಭಿನಯದ ‘ಒರಿಯರ್ದೊರಿ ಅಸಲ್’ ತುಳು ನಾಟಕ ಪ್ರದರ್ಶನ ಇದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿ.ಪ್ರಭಾಕರ್ ಭಂಡಾರಿ, ಪ್ರಕಾಶ್ ಸುವರ್ಣ ಕಟಪಾಡಿ, ತಾರಾ ಉಮೇಶ್ ಆಚಾರ್ಯ, ದಯಾನಂದ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.