ಉಡುಪಿ: ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಈಚೆಗೆ ಕುಸಲ್ದ ಗೊಬ್ಬಲು 2025 ಕಾರ್ಯಕ್ರಮ ಆಯೋಜಿಸಲಾಗಿತ್ತು.
ಉತ್ಸವವನ್ನು ಕಾಲೇಜಿನ ಪ್ರಾಚಾರ್ಯೆ ಆಶಾ ಕುಮಾರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ತುಳು ಸಂಸ್ಕೃತಿಯನ್ನು ಅಳವಡಿಸಿಕೊಂಡು ಸುಸಂಸ್ಕೃತರಾಗಬೇಕು. ಉತ್ಸವಗಳ ಆಚರಣೆಯು ವಿದ್ಯಾರ್ಥಿಗಳಲ್ಲಿ ಸಮಾನತೆ, ಸಹಬಾಳ್ವೆ, ಶಾಂತಿ, ಸೌಹಾರ್ದತೆ ಬೆಳೆಯಲು ಕಾರಣವಾಗುತ್ತದೆ ಎಂದು ಹೇಳಿದರು.
ಉಪನ್ಯಾಸಕ ಜಾವೇದ್, ಹರಿಕೇಶವ್, ಚಂದ್ರಶೇಖರ್ ಮಾತನಾಡಿದರು. ಕರದರ್ಪುನಿ, ಲಗೋರಿ, ಸೊಪ್ಪಾಟ, ಹಗ್ಗ ಜಗ್ಗಾಟ ಮೊದಲಾದ ಗ್ರಾಮೀಣ ಕ್ರೀಡಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದರು.
ಉಪ ಪ್ರಾಚಾರ್ಯ ರಾಧಾಕೃಷ್ಣ ರಾವ್, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಪ್ರಭಾ ಕಾಮತ್, ಸನ್ನಿಧಿ, ಹರಿಕಿಶನ್ ಉಪಸ್ಥಿತರಿದ್ದರು. ಸನ್ನಿಧಿ ಶೆಟ್ಟಿ ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.