ADVERTISEMENT

ಕೇಂದ್ರೀಯ ವಿದ್ಯಾಲಯ ಕಟ್ಟಡಕ್ಕೆ ₹ 26 ಕೋಟಿ ಅನುದಾನ: ಸಚಿವೆ ಶೋಭಾ ಕರಂದ್ಲಾಜೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2023, 14:32 IST
Last Updated 6 ಮಾರ್ಚ್ 2023, 14:32 IST
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ   

ಉಡುಪಿ: ₹ 26 ಕೋಟಿ ವೆಚ್ಚದಲ್ಲಿ ಸುಸಜ್ಜಿತವಾದ ಉಡುಪಿಯ ಕೇಂದ್ರೀಯ ವಿದ್ಯಾಲಯ ಕಟ್ಟಡ ನಿರ್ಮಾಣವಾಗಲಿದೆ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಉಡುಪಿಯಲ್ಲಿ ಕೇಂದ್ರೀಯ ವಿದ್ಯಾಲಯ ಕಟ್ಟಡ ನಿರ್ಮಾಣ ಹಾಗೂ 9 ಸಿಬ್ಬಂದಿಗೆ ವಸತಿ ಗೃಹಗಳ ನಿರ್ಮಾಣಕ್ಕೆ ಕೇಂದ್ರ ಶಿಕ್ಷಣ ಮತ್ತು ಕೌಶಲ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್‌ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿ 26 ಕೋಟಿ ಅನುದಾನ ಮಂಜೂರು ಮಾಡಿದೆ.

ಪ್ರಸ್ತುತ ಬಾಡಿಗೆ ಕಟ್ಟಡದಲ್ಲಿ ಕೇಂದ್ರೀಯ ವಿದ್ಯಾಲಯ ಹೊಸದಾಗಿ ನಿರ್ಮಾಣವಾಗಲಿದ್ದು 1 ರಿಂದ 10ನೇ ತರಗತಿಗಳಿಗೆ ತಲಾ ಎರಡು ವಿಭಾಗಗಳುಳ್ಳ ತರಗತಿ ಕೊಠಡಿಗಳು ಹಾಗೂ ಸಿಬ್ಬಂದಿ ವಸತಿ ಗೃಹ ನಿರ್ಮಾಣವಾಗಲಿದೆ. ಈಗಾಗಲೇ ಟೆಂಡರ್ ಅನುಮೋದನೆಯಾಗಿದ್ದು, ಶೀಘ್ರದಲ್ಲಿ ಕಟ್ಟಡ ಕಾಮಗಾರಿ ಪ್ರಾರಂಭವಾಗಲಿದೆ.

ADVERTISEMENT

ಕೇಂದ್ರೀಯ ವಿದ್ಯಾಲಯ ಈ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಲಿದೆ. ಕರಾವಳಿ ಭಾಗದ ವಿದ್ಯಾರ್ಥಿಗಳಿಗೆ ಸೌಲಭ್ಯ ನೀಡಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಶಿಕ್ಷಣ ಮತ್ತು ಕೌಶಲ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್‌ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.