
ಪ್ರಜಾವಾಣಿ ವಾರ್ತೆ
ಬಂಧನ
(ಸಾಂದರ್ಭಿಕ ಚಿತ್ರ)
ಉಡುಪಿ: ಇನ್‌ಸ್ಟಾಗ್ರಾಂನಲ್ಲಿ ದ್ವೇಷ ಹರಡುವ ಮಾಹಿತಿಯನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಪುತ್ತೂರು ರಸ್ತೆಯ ನಿತೇಶ್ ಕೆ. (20), ಕಡಬ ತಾಲ್ಲೂಕಿನ ಸಿರಿಬಾಗಿಲು ಗ್ರಾಮದ ಹಿತೇಶ್ ಎ. (19) ಬಂಧಿತ ಆರೋಪಿಗಳು. ಆರೋಪಿಗಳಿಂದ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಾರ್ಕಳದ ಹಿಂದೂ ವಿವಾಹಿತೆ ಮತ್ತು ಮುಸ್ಲಿಂ ಯುವಕನ ಕುರಿತು ವ್ಯಂಗ್ಯವಾಗಿ ಧರ್ಮ ಧರ್ಮಗಳ ನಡುವೆ ವೈಮನಸ್ಸು ಉಂಟುಮಾಡುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರದಾಡುತ್ತಿತ್ತು. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.