ಉಡುಪಿ: ಇಬ್ಬರು ಕೊರೊನಾ ವಾರಿಯರ್ಸ್ ಸೇರಿ 22 ಮಂದಿಯಲ್ಲಿ ಗುರುವಾರ ಕೋವಿಡ್–19 ಸೋಂಕು ದೃಢಪಟ್ಟಿದೆ.
20 ಮಂದಿಗೆ ಮುಂಬೈ ಸಂಪರ್ಕವಿದ್ದು, ಒಬ್ಬರು ಆರೋಗ್ಯ ಕಾರ್ಯಕರ್ತರು ಹಾಗೂ ಮತ್ತೊಬ್ಬರು ಗ್ರೂಪ್ ‘ಡಿ’ ನೌಕರರಾಗಿದ್ದಾರೆ. ಸೋಂಕಿತರಲ್ಲಿ 11 ಪುರುಷರು, 9 ಮಹಿಳೆಯರು, ಇಬ್ಬರು ಮಕ್ಕಳಿದ್ದಾರೆ. ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
658 ಮಂದಿ ಗುಣಮುಖ:ಜಿಲ್ಲೆಯಲ್ಲಿ ಇದುವರೆಗೂ ಸೋಂಕಿನಿಂದ ಗುಣಮುಖರಾದ 552 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಗುರುವಾರ 106 ಜನರ ವೈದ್ಯಕೀಯ ಪರೀಕ್ಷೆ ನೆಗೆಟಿವ್ ಬಂದಿದ್ದು ಗುರುವಾರ ಹಾಗೂ ಶುಕ್ರವಾರ ಡಿಸ್‌ಚಾರ್ಜ್ ಮಾಡಲಾಗುವುದು. ಸದ್ಯ ಜಿಲ್ಲೆಯಲ್ಲಿ 308 ಸಕ್ರಿಯ ಪ್ರಕರಣಗಳು ಮಾತ್ರ ಇವೆ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.