ADVERTISEMENT

ಹಿಜಾಬ್‌ ಕಾನೂನು ಹೋರಾಟ ಮಾಡುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರು

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2022, 10:59 IST
Last Updated 29 ಮಾರ್ಚ್ 2022, 10:59 IST
   

ಉಡುಪಿ: ಹಿಜಾಬ್‌ಗಾಗಿ ಕಾನೂನು ಹೋರಾಟ ನಡೆಸುತ್ತಿರುವ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಮುಸ್ಕಾನ್ ಹಾಗೂ ಶಫಾ ಪ್ರಥಮ ಪಿಯುಸಿ ಪರೀಕ್ಷೆಗೆ ಗೈರಾಗಿದ್ದಾರೆ.

ಮಂಗಳವಾರದಿಂದ ಪ್ರಥಮ ಪಿಯುಸಿ ಪರೀಕ್ಷೆ ಆರಂಭವಾಗಿದ್ದು ಮುಸ್ಕಾನ್ ಹಾಗೂ ಶಫಾ ಬಿಸಿನೆಸ್ ಸ್ಟಡೀಸ್ ವಿಷಯದಲ್ಲಿ ಪರೀಕ್ಷೆ ಬರೆಯಬೇಕಾಗಿತ್ತು. ಆದರೆ, ಇಬ್ಭರೂ ಗೈರಾಗಿದ್ದಾರೆ. 120 ವಿದ್ಯಾರ್ಥಿನಿಯರ ಪೈಕಿ 118 ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಪ್ರಾಂಶುಪಾಲ ರುದ್ರೇಗೌಡ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.