ADVERTISEMENT

ಪಡುಬಿದ್ರಿ|ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ: ವರಮಹಾಲಕ್ಷ್ಮಿ ಪೂಜೆ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2025, 7:46 IST
Last Updated 9 ಆಗಸ್ಟ್ 2025, 7:46 IST
ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆಯಲ್ಲಿ ಪಾಲ್ಗೊಂಡ ಮಹಿಳೆಯರು
ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆಯಲ್ಲಿ ಪಾಲ್ಗೊಂಡ ಮಹಿಳೆಯರು   

ಪಡುಬಿದ್ರಿ: ಇಲ್ಲಿಗೆ ಸಮೀಪದ ಉಚ್ಚಿಲ ಮೊಗವೀರ ಮಹಾಜನ ಸಂಘದ ಅಧೀನದಲ್ಲಿರುವ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶ್ರಾವಣ ಶುಕ್ರವಾರದ ಪ್ರಯುಕ್ತ ವರಮಹಾಲಕ್ಷ್ಮಿ ಪೂಜೆ ಸಂಪನ್ನಗೊಂಡಿತು.

ಕೆ.ವಿ. ರಾಘವೇಂದ್ರ ಉಪಾಧ್ಯಾಯ ಅವರು ವರಮಹಾಲಕ್ಷ್ಮೀ ಪೂಜಾ ವಿಧಿವಿಧಾನ ಪೂರ್ಣಗೊಳಿಸಿದರು. ಸಾವಿರಾರು ಮಹಿಳೆಯರು ವರಮಹಾಲಕ್ಷ್ಮೀ ಪೂಜೆಯಲ್ಲಿ ಭಾಗಿಯಾದರು. ಸಾವಿರಾರು ಭಕ್ತರು ಮಹಾ ಅನ್ನಪ್ರಸಾದ ಸ್ವೀಕರಿಸಿದರು.

ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರದ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಗುಂಡು ಬಿ. ಅಮೀನ್, ವಾಸುದೇವ ಸಾಲ್ಯಾನ್, ಸುಧಾಕರ್ ಕುಂದರ್, ಮೋಹನ್ ಬಂಗೇರ ಕಾಪು, ಪದ್ಮನಾಭ ಕೋಟ್ಯಾನ್, ದಿನೇಶ್ ಎರ್ಮಾಳು, ಸುಗುಣ ಕರ್ಕೇರ, ಕ್ಷೇತ್ರದ ಪ್ರಧಾನ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕರೆ ಭಾಗವಹಿಸಿದ್ದರು.

ADVERTISEMENT

ಎರ್ಮಾಳು ಆದಿಶಕ್ತಿ ವೀರಭದ್ರ ದೇವಸ್ಥಾನದಲ್ಲಿ ಅರ್ಚಕ ವೈ. ಗಣಪತಿ ನೇತೃತ್ವದಲ್ಲಿ ನಡೆದ ವರಮಹಾಲಕ್ಷ್ಮೀ ಪೂಜೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.