ADVERTISEMENT

ಆನೆಗುಡ್ಡೆ: ರಥೋತ್ಸವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2022, 4:50 IST
Last Updated 28 ನವೆಂಬರ್ 2022, 4:50 IST
ಕುಂದಾಪುರ ಸಮೀಪದ ಕುಂಭಾಸಿಯ ಆನೆಗುಡ್ಡೆ ವಿನಾಯಕ ದೇವಸ್ಥಾನದ ರಥೋತ್ಸವ ಭಾನುವಾರ ನಡೆಯಿತು
ಕುಂದಾಪುರ ಸಮೀಪದ ಕುಂಭಾಸಿಯ ಆನೆಗುಡ್ಡೆ ವಿನಾಯಕ ದೇವಸ್ಥಾನದ ರಥೋತ್ಸವ ಭಾನುವಾರ ನಡೆಯಿತು   

ಕುಂದಾಪುರ: ಇಲ್ಲಿಗೆ ಸಮೀಪದ ಕುಂಭಾಸಿಯ ಆನೆಗುಡ್ಡೆ ಶ್ರೀ ವಿನಾಯಕ ದೇವರ ಬ್ರಹ್ಮರಥೋತ್ಸವ ಭಾನುವಾರ ವೈಭವದಿಂದ ಸಂಪನ್ನಗೊಂಡಿತು.

ಲೋಕಕಲ್ಯಾಣಾರ್ಥ ಯಂತ್ರೋದ್ಧಾರ ಪೂರ್ವಕ ಅಷ್ಟೋತ್ತರ ಸಹಸ್ರ ನಾಳಿಕೇರ ಗಣಯಾಗ, ಸುವರ್ಣ ಪಲ್ಲಕಿ ಉತ್ಸವ, ಮಹಾ ಅನ್ನಸಂತರ್ಪಣೆ, ಶಯನೋತ್ಸವ, ರಾತ್ರಿ ಸುಡುಮದ್ದು ಪ್ರದರ್ಶನ, ಪ್ರಸಾದ ವಿತರಣೆ, ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

‌ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಾಲಿಗ್ರಾಮ ಸತೀಶ್ ದೇವಾಡಿಗ ಮತ್ತು ಬಳಗದವರಿಂದ ಸ್ಯಾಕ್ಸೊಫೋನ್ ವಾದನ, ಹನು ಮಗಿರಿ ಶ್ರೀ ಕೋದಂಡರಾಮ ಯಕ್ಷಗಾನ ಮಂಡಳಿ ಇವರಿಂದ ಪೌರಾಣಿಕ ಪ್ರಸಂಗ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಿತು.

ADVERTISEMENT

ದೇವಳದ ಆಡಳಿತ ಮೊಕ್ತೇಸರ ಕೆ.ಶ್ರೀರಮಣ ಉಪಾಧ್ಯಾಯ, ಹಿರಿಯ ಮೊಕ್ತೇಸರರಾದ ಕೆ.ಸೂರ್ಯ ನಾರಾಯಣ ಉಪಾಧ್ಯಾಯ, ಕೆ.ವಿಠಲ ಉಪಾಧ್ಯಾಯ, ಪರ್ಯಾಯ ಅರ್ಚಕ ಕೆ.ದೇವಿದಾಸ್ ಉಪಾಧ್ಯಾಯ, ವ್ಯವಸ್ಥಾಪಕ ನಟೇಶ್ ಕಾರಂತ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.