ADVERTISEMENT

ಅಡಿಕೆಗೆ ಎಲೆಚುಕ್ಕಿ ರೋಗ: ಹತೋಟಿಗೆ ತುರ್ತು ₹10 ಕೋಟಿ– ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2022, 5:33 IST
Last Updated 8 ನವೆಂಬರ್ 2022, 5:33 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಕುಂದಾಪುರ (ಉಡುಪಿ): ಅಡಿಕೆ ಮರಗಳಿಗೆ ಬಾಧಿಸುತ್ತಿರುವ ಎಲೆಚುಕ್ಕಿ ರೋಗದ ಹತೋಟಿಗಾಗಿ ತುರ್ತು ₹ 10 ಕೋಟಿ ಒದಗಿಸಲಾಗುವುದು. ತಜ್ಞರ ವರದಿ ಪಡೆದು ಕೇಂದ್ರ ಸರ್ಕಾರ ದೊಂದಿಗೆ ಸಮನ್ವಯ ಸಾಧಿಸ ಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಮೀಪದ ಮುಳ್ಳಿಕಟ್ಟೆಯಲ್ಲಿ ಮಾತನಾಡಿದ ಅವರು, ‘ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಕೃಷಿಕರ ಮುಖ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ ಬೆಳೆಯಲ್ಲಿ ಕಾಣಿಸಿಕೊಂಡಿರುವ ಬಿಳಿಚುಕ್ಕೆ ರೋಗದಿಂದ ಕೃಷಿಕರು ಆತಂಕಕ್ಕೆ ಒಳಗಾಗಿದ್ದಾರೆ. ಈ ರೋಗದ ಬಗ್ಗೆ ಕೃಷಿ ವಿಶ್ವವಿದ್ಯಾಲಯ ಹಾಗೂ ಕೇಂದ್ರ ಸರ್ಕಾರದ ತಂಡ ಪರಿಶೀಲನೆ ನಡೆಸುತ್ತಿದ್ದು, ವೈಜ್ಞಾನಿಕವಾದ ಕಾರಣವನ್ನು ಪತ್ತೆ ಹಚ್ಚಿ ಬಳಿಕ ಅದರ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ರೋಗ ಹರಡದಂತೆ ವಿಜ್ಞಾನಿಗಳು ತಿಳಿಸಿರುವ ಔಷಧ ಸಿಂಪಡಣೆ ಕಾರ್ಯಕ್ಕೆ ಸರ್ಕಾರ ಸಹಕಾರ ನೀಡಲಿದೆ ಎಂದು ಹೇಳಿದರು.

ಶಾಲೆಗಳಲ್ಲಿ ಮಕ್ಕಳಿಗೆ ಧ್ಯಾನ ಅಭ್ಯಾಸ ಮಾಡಿಸುವ ಸುತ್ತೋಲೆಗೆ ಅಪಸ್ಪರ ಏಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಒಳ್ಳೆಯ ಕಾರ್ಯ ಹಾಗೂ ನಿರ್ಧಾರ ತೆಗೆದುಕೊಳ್ಳುವಾಗ ಪರ ಮತ್ತು ವಿರೋಧ ಅಭಿಪ್ರಾಯ ಸಹಜ. ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.