ADVERTISEMENT

ರಾಜ್ಯಮಟ್ಟದ ವಾರ್ಷಿಕ ಕ್ರೀಡಾಕೂಟ: ಉಡುಪಿಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 21 ಜನವರಿ 2023, 16:21 IST
Last Updated 21 ಜನವರಿ 2023, 16:21 IST
ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಪೊಲೀಸ್‌ ವಾರ್ಷಿಕ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆ ಹಾಗೂ ಪಶ್ವಿಮ ವಲಯದಿಂದ ಭಾಗವಹಿಸಿದ ಸ್ಪರ್ಧಿಗಳು ವಿವಿಧ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆದಿದ್ದಾರೆ.
ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಪೊಲೀಸ್‌ ವಾರ್ಷಿಕ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆ ಹಾಗೂ ಪಶ್ವಿಮ ವಲಯದಿಂದ ಭಾಗವಹಿಸಿದ ಸ್ಪರ್ಧಿಗಳು ವಿವಿಧ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆದಿದ್ದಾರೆ.   

ಉಡುಪಿ: ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಪೊಲೀಸ್‌ ವಾರ್ಷಿಕ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆ ಹಾಗೂ ಪಶ್ವಿಮ ವಲಯದಿಂದ ಭಾಗವಹಿಸಿದ ಸ್ಪರ್ಧಿಗಳು ವಿವಿಧ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆದಿದ್ದಾರೆ.

ಉಡುಪಿ ಜಿಲ್ಲೆಯಿಂದ ಸ್ಪರ್ಧಿಸಿದ ಮಲ್ಪೆ ಪಿಎಸ್‌ಐ ಸುಷ್ಮಾ ಭಂಡಾರಿ ಜಾವೆಲಿನ್‌ನಲ್ಲಿ ಪ್ರಥಮ, ಶಾಟ್‌ಪಟ್‌ನಲ್ಲಿ ದ್ವಿತೀಯ, ಪಿಸ್ತೂಲ್‌ ಶೂಟಿಂಗ್‌ ಹಾಗೂ 100 ಮೀ. ಓಟದಲ್ಲಿ ತೃತೀಯ ಬಹುಮಾನ ಪಡೆದಿದ್ದಾರೆ.

ಬ್ರಹ್ಮಾವರ ವೃತ್ತ ಕಚೇರಿಯ ಎಚ್‌.ಪಿ.ನಾಗಶ್ರೀ ಶಾಟ್‌ಪಟ್‌ ಸ್ಪರ್ಧೆಯಲ್ಲಿ ದ್ವಿತೀಯ, 4x100 ರಿಲೇಯಲ್ಲಿ ಉಡುಪಿ ತಂಡದ ಸದಸ್ಯರಾದ ಜಯ ಪಟಗಾರ್‌, ಪ್ರೀತಿ, ಜೆ.ಡಿ.ನಾಗರತ್ನ, ನಾಗಶ್ರೀ ತೃತೀಯ ಸ್ಥಾನ ಪಡೆದಿದ್ದಾರೆ.

ADVERTISEMENT

ವಾಲಿಬಾಲ್‌ ಸ್ಪರ್ಧೆಯಲ್ಲಿ ಪಶ್ಚಿಮ ವಲಯ ಮಂಗಳೂರು ತಂಡ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದೆ. ಈ ತಂಡದಲ್ಲಿ ಉಡುಪಿ ಜಿಲ್ಲೆಯಿಂದ ರಾಮು ಹೆಗಡೆ, ವಿಜಯ್‌ ಕುಮಾರ್‌, ಜೆ.ಶರತ್‌, ಎಂ.ಕಾರ್ತಿಕ್‌ ಇದ್ದರು. ಸ್ಪರ್ಧೆಯಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಭಾಗವಹಿಸಿದ ಎಲ್ಲ ಅಧಿಕಾರಿ ಸಿಬ್ಬಂದಿಗೆ ಎಸ್‌ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಅಭಿನಂದನೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.