ADVERTISEMENT

ಉಡುಪಿ: ಜಮ್ಮುವಿನಲ್ಲಿ ಸೇನಾ ವಾಹನ ಅಪಘಾತ: ಕುಂದಾಪುರದ ಯೋಧ ಹುತಾತ್ಮ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2024, 9:31 IST
Last Updated 25 ಡಿಸೆಂಬರ್ 2024, 9:31 IST
   

ಉಡುಪಿ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಕುಂದಾಪುರದ ಬೀಜಾಡಿಯ ಯೋಧ ಅನೂಪ್ ಪೂಜಾರಿ (31) ಮೃತಪಟ್ಟಿದ್ದಾರೆ.

13 ವರ್ಷಗಳ ಹಿಂದೆ ಸೇನೆಗೆ ಸೇರಿದ್ದ ಅನೂಪ್ ಅವರು ಮರಾಠ ರೆಜಿಮೆಂಟ್‌ನಲ್ಲಿ ಕಾರ್ಯ

ನಿರ್ವಹಿಸುತ್ತಿದ್ದರು.

ADVERTISEMENT

ಅನೂಪ್ ಅವರಿಗೆ ಪತ್ನಿ ಹಾಗೂ ಎರಡು ವರ್ಷದ ಹೆಣ್ಣು ಮಗುವಿದೆ.

ರಜೆಯಲ್ಲಿ ಊರಿಗೆ ಬಂದಿದ್ದ ಅನೂಪ್ ಅವರು ಡಿ.21 ರಂದು ಕೆಲಸಕ್ಕೆ ಮರಳಿದ್ದರು ಎಂದು ಮೂಲಗಳು ತಿಳಿಸಿವೆ.

ಪೂಂಛ್ ಜಿಲ್ಲೆಯ ಗಡಿನಿಯಂತ್ರಣ ರೇಖೆಯ ಬಳಿ ಸೇನಾ ವಾಹನ ಕಂದಕಕ್ಕೆ ಉರುಳಿ ಐವರು ಯೋಧರು ಮೃತಪಟ್ಟಿದ್ದರು. ಮೃತಪಟ್ಟವರಲ್ಲಿ ಮೂವರು ಕರ್ನಾಟಕದವರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.