ಉಡುಪಿ: ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಶುಕ್ರವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ಗೋ ಶಾಲೆಗೆ ತೆರಳಿ, ಗೋ ಸೇವೆ ಮಾಡಿ, ಗೀತ ಮಂದಿರದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಅನುಗ್ರಹ ಪ್ರಸಾದ ಸ್ವೀಕರಿಸಿದರು. ಗೀತಾ ಮಂದಿರದಲ್ಲಿ ಭಾರತ್ ಮೇಳದ ಅಂಗವಾಗಿ ನಡೆಯುವ ವಿಶೇಷ ವಿಶ್ವರೂಪ ಪ್ಲಾನಿಟೋರಿಯಂ ಪ್ರದರ್ಶನದ ಉದ್ಘಾಟನೆಯನ್ನು ಬಿ.ಎಲ್. ಸಂತೋಷ್ ನೆರವೇರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.