ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳ ಜತೆಗೆ ಬಾಂಬ್ ಕೂಡ ಉಚಿತವಾಗಿ ಸಿಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿದ್ದ ಮಲ್ಪೆಯ ಗರಡಿ ಮಜಲಿನ ದಿವಾಕರ್ ಕೋಟ್ಯಾನ್ ವಿರುದ್ಧ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಚೆಗೆ ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಘಟನೆ ಸಂಬಂಧ ವಿಡಿಯೋ ಮಾಡಿದ್ದ ದಿವಾಕರ ಕೋಟ್ಯಾನ್ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ, ₹ 2,000 ಧನ ಸಹಾಯ, ಉಚಿತ ವಿದ್ಯುತ್ ಜತೆಗೆ ಬಾಂಬ್ ಸ್ಫೋಟವನ್ನು ಉಚಿತವಾಗಿ ಕೊಡುತ್ತಿದೆ ಎಂದು ಲೇವಡಿ ಮಾಡಿದ್ದರು. ಈ ಸಂಬಂಧ ದಿವಾಕರ್ ಕೋಟ್ಯಾನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.