
ಉಡುಪಿ: ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ಬಡವರ ಹಕ್ಕನ್ನು ಕಸಿಯಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಮೆರವಣಿಗೆಯಲ್ಲಿ ಬಂದ ಪ್ರತಿಭಟನಕಾರರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಮಾತನಾಡಿ, ಕೇಂದ್ರ ಸರ್ಕಾರವು ಮನರೇಗಾ ಯೋಜನೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ಬಡವರಿಗೆ ಅನ್ಯಾಯ ಮಾಡುತ್ತಿದೆ ಎಂದರು.
ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪ್ರಮುಖರಾದ ಎಂ.ಎ.ಗಫೂರ್, ಉದಯ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.