ADVERTISEMENT

ಉಡುಪಿ: 53 ಮಂದಿಗೆ ಕೋವಿಡ್‌, ಸೋಂಕಿಗೆ ಬೈಂದೂರಿನ ವೃದ್ಧ ಸಾವು

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 17:29 IST
Last Updated 13 ಜುಲೈ 2020, 17:29 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಉಡುಪಿ: ಕುಂದಾಪುರದ 23, ಉಡುಪಿಯ 27 ಹಾಗೂ ಕಾರ್ಕಳದ ಮೂವರು ಸೇರಿ ಸೋಮವಾರ 53 ಜನರಲ್ಲಿ ಕೋವಿಡ್‌–19 ಸೋಂಕು ದೃಢಪಟ್ಟಿದೆ.

ಸೋಂಕಿತರಲ್ಲಿ 31 ಪುರುಷರು, 18 ಮಹಿಳೆಯರು ಹಾಗೂ ನಾಲ್ವರು ಮಕ್ಕಳು ಇದ್ದು, ಎಲ್ಲರನ್ನೂ ಕೋವಿಡ್‌ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶೀತಜ್ವರದ ಲಕ್ಷಣಗಳಿದ್ದ 12 ಮಂದಿಯಲ್ಲಿ ಹಾಗೂ ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ 41 ಜನರಿಗೆ ಸೋಂಕು ತಗುಲಿದೆ.

ಸೋಮವಾರ ಸಾರಿ, ಐಎಲ್‌ಐ ಲಕ್ಷಣಗಳಿದ್ದ ಹಾಗೂ ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ 206 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 1,749 ವರದಿಗಳು ಬರುವುದು ಬಾಕಿ ಇದೆ.

ADVERTISEMENT

ಸೋಂಕಿನ ಲಕ್ಷಣಗಳು ಕಂಡುಬಂದ 29 ಪುರುಷರು ಹಾಗೂ ಐವರು ಮಹಿಳೆಯುರು ಸೇರಿ 34 ಜನರನ್ನು ಐಸೊಲೇಷನ್‌ ವಾರ್ಡ್‌ಗೆ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1661ಕ್ಕೇರಿಕೆಯಾಗಿದ್ದು, 378 ಸಕ್ರಿಯ ಪ್ರಕರಣಗಳಿವೆ. 1,280 ಮಂದಿ ಸೋಮಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.‌

ಕೋವಿಡ್‌: ವೃದ್ಧ ಸಾವು

ಕೋವಿಡ್‌ ಸೋಂಕು ತಗುಲಿ ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಂದೂರು ತಾಲ್ಲೂಕಿನ ಉಪ್ಪುಂದದ 72 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಹಲವು ಗಂಭೀರ ಸಮಸ್ಯೆಗಳಿಂದ ಬಳಲುತ್ತಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್‌ ಸೋಂಕಿನಿಂದ ಮೃತಪ‍ಟ್ಟವರ ಸಂಖ್ಯೆ ನಾಲ್ಕಕ್ಕೇರಿಕೆಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.