ADVERTISEMENT

ಉಡುಪಿ: 92 ಮಂದಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2021, 15:15 IST
Last Updated 11 ಏಪ್ರಿಲ್ 2021, 15:15 IST

ಉಡುಪಿ: ಜಿಲ್ಲೆಯಲ್ಲಿ ಭಾನುವಾರ 92 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, ಉಡುಪಿಯ 38, ಕುಂದಾಪುರದ 44 ಹಾಗೂ ಕಾರ್ಕಳದ 10 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರಲ್ಲಿ 52 ಪುರುಷರು 40 ಮಹಿಳೆಯರು ಇದ್ದಾರೆ.

15 ಸೋಂಕಿತರಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡಿದ್ದರೆ, 77 ಜನರಲ್ಲಿ ಲಕ್ಷಣಗಳು ಪತ್ತೆಯಾಗಿಲ್ಲ. 18 ಮಂದಿ ಆಸ್ಪತ್ರೆಯಲ್ಲಿ ಉಳಿದ 74 ಸೋಂಕಿತರು ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 25,972 ಇದ್ದು, 371 ಸಕ್ರಿಯ ಸೋಂಕಿತರು ಇದ್ದಾರೆ. 25,409 ಮಂದಿ ಗುಣಮುಖರಾಗಿದ್ದು, 192 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.