ಉಡುಪಿ: ಮಾದಕ ವಸ್ತುಗಳಿಗೆ ಸಂಬಂಧಿಸಿ ಜಿಲ್ಲೆಯಲ್ಲಿ ಹದಿನೈದು ದಿನಗಳಲ್ಲಿ ಒಟ್ಟು 35 ಪ್ರಕರಣಗಳು ದಾಖಲಾಗಿದ್ದು, ಒಟ್ಟು 35 ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಕುಂದಾಪುರ ಪೊಲೀಸ್ ಠಾಣೆಯಲ್ಲಿ ಒಟ್ಟು ಏಳು ಪ್ರಕರಣಗಳು ದಾಖಲಾಗಿದ್ದು, ಏಳು ಆರೋಪಿಗಳ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಒಟ್ಟು ಆರು ಪ್ರಕರಣಗಳು ದಾಖಲಾಗಿದ್ದು, ಆರು ಆರೋಪಿತರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಕಾರ್ಕಳ ನಗರ ಮತ್ತು ಮಲ್ಪೆ ಪೊಲೀಸ್ ಠಾಣೆಗಳಲ್ಲಿ ತಲಾ ಐದು ಪ್ರಕರಣಗಳು ದಾಖಲಾಗಿದ್ದು, ಐವರು ಆರೋಪಿಗಳ ವಿರುದ್ಧ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಹಾಗೂ ಕಾಪು ಮತ್ತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ತಲಾ ಎರಡು ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಹಿರಿಯಡಕ, ಕೊಲ್ಲೂರು, ಕೋಟ ಮತ್ತು ಶಿರ್ವ ಪೊಲೀಸ್ ಠಾಣೆಗಳಲ್ಲಿ ತಲಾ 1 ಪ್ರಕರಣಗಳು ದಾಖಲಾಗಿದ್ದು, ಒಟ್ಟು ನಾಲ್ವರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಗಾಂಜಾ ಸೇವನೆ ಮತ್ತು ಸರಬರಾಜು ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಮಾದಕ ವಸ್ತು ನಾಶ
ಉಡುಪಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡಿದ್ದ ಸುಮಾರು 9 ಕೆ.ಜಿ ತೂಕದ ಮಾದಕ ವಸ್ತುಗಳನ್ನು ಪಡುಬಿದ್ರಿ ಠಾಣಾ ವ್ಯಾಪ್ತಿಯ ಆಯುಷ್ ಎನ್‌ವಿರೋಟೆಕ್‌ನಲ್ಲಿ ಗುರುವಾರ ನಾಶಪಡಿಸಲಾಯಿತು. ₹15.21 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಟ್ಟು 10 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮಾದಕ ದ್ರವ್ಯವನ್ನು ನ್ಯಾಯಾಲಯದ ಆದೇಶಾನುಸಾರ ನಾಶಗೊಳಿಸಲಾಗಿದೆ ಎಂದಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಜಿಲ್ಲಾ ಡ್ರಗ್ ಡಿಸ್‌ಪೋಸಲ್ ಸಮಿತಿ ಸದಸ್ಯರು ಹಾಗೂ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಹರ್ಷಾ ಪ್ರಿಯಂವದಾ ಡಿವೈಎಸ್‌ಪಿ ಪ್ರಭು ಡಿ.ಟಿ. ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.