ADVERTISEMENT

ಉಡುಪಿ ಎನ್‌ಕೌಂಟರ್: ಕಾನೂನು ಚೌಕಟ್ಟಿನಲ್ಲಿ ಪೊಲೀಸರ ಕ್ರಮ– ಲಕ್ಷ್ಮಿ ಹೆಬ್ಬಾಳಕರ್

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2024, 7:09 IST
Last Updated 30 ನವೆಂಬರ್ 2024, 7:09 IST
<div class="paragraphs"><p>ಲಕ್ಷ್ಮಿ ಹೆಬ್ಬಾಳಕರ್</p></div>

ಲಕ್ಷ್ಮಿ ಹೆಬ್ಬಾಳಕರ್

   

ಉಡುಪಿ: ಹೆಬ್ರಿ ತಾಲ್ಲೂಕಿನ ಪೀತುಬೈಲ್‌ನಲ್ಲಿ ನಡೆದ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್‌ಕೌಂಟ‌ರ್‌ ವಿಚಾರದಲ್ಲಿ ಪೊಲೀಸರು ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.

ಸುದ್ದಿಗಾರರ ಜೊತೆ ಶನಿವಾರ ಇಲ್ಲಿ ಮಾತನಾಡಿದ ಅವರು, ನಕ್ಸಲರನ್ನು ಕಟ್ಟಿ ಹಾಕಬೇಕು ಎಂಬುದು ಸರ್ಕಾರದ ನಿರ್ಧಾರ ಎಂದರು.

ADVERTISEMENT

'ಕೂಂಬಿಂಗ್ ಮಾಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಕ್ರಂ ಗೌಡನ ಬಳಿ ಕೂಡ ಶಸ್ತ್ರಾಸ್ತ್ರಗಳು ಇತ್ತು. ಆತ ಒಂದು ಬಾರಿ ಫೈರಿಂಗ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಪ್ರತಿ ದಾಳಿ ಮಾಡದಿದ್ದರೆ ಪೊಲೀಸರ ಜೀವ ಹಾನಿ ಆಗುತ್ತಿತ್ತು' ಎಂದು ಹೇಳಿದರು.

'ನಕ್ಸಲರನ್ನು ಬೇರು ಸಮೇತ ಕಿತ್ತು ಹಾಕಬೇಕು ಎಂಬುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ನಿಲುವು. ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭಗಳಲ್ಲೂ ಇರುತ್ತವೆ. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದೆ' ಎಂದರು

'ಸಂಶಯ ಇದ್ದವರಿಗೆ ನಾವು ಮತ್ತೆ ಸ್ಪಷ್ಟನೆ ಕೊಡಲು ತಯಾರಿದ್ದೇವೆ' ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.