ಉಡುಪಿ: TP ವ್ಯಾಪ್ತಿಯಿಂದ ಹಳ್ಳಿಗಳನ್ನು ಕೈ ಬಿಡಲು ಆಗ್ರಹಿಸಿ ರೈತರಿಂದ ಪ್ರತಿಭಟನೆ
ಉಡುಪಿ: ಹಳ್ಳಿಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನ ಸಭೆಯಲ್ಲಿ ಮಾತನಾಡಿದ ತಾಲ್ಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ, ಹಳ್ಳಿಗಳನ್ನು, ಅರಣ್ಯ ಪ್ರದೇಶಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸೇರಿಸಿರುವುದರಿಂದ ಜನರಿಗೆ ಸಮಸ್ಯೆಯಾಗಿದೆ ಎಂದರು.
ಹಳ್ಳಿಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಡುವವರೆಗೂ ನಾವು ಯವುದೇ ರಾಜಕೀಯ ಪಕ್ಷಗಳ ಕಾರ್ಯಕ್ರಮಗಳಲ್ಲಿ ಭಾವಹಿಸುವುದಿಲ್ಲ ಎಂದರು.
ನಮ್ಮ ಬೇಡಿಕೆ ಈಡೇರುವವರೆಗೆ ಬೈಂದೂರಿನಲ್ಲಿ ಪ್ರತಿಭಟನೆ ಮುಂದುವರಿಸುತ್ತೇವೆ ಎಂದೂ ಹೇಳಿದರು.
ಅರುಣ್ ಕುಮಾರ್, ವೀರಭದ್ರ ಗಾಣಿಗ, ಕೃಷ್ಣ ದೇವಾಡಿಗ, ಮ್ಯಾಥ್ಯು, ನಾಗರಾಜ್ ಮರಾಠೆ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.