
ಪ್ರಜಾವಾಣಿ ವಾರ್ತೆ
ಉಡುಪಿ: ಕುಂದಾಪುರದ ರಥಬೀದಿಯ ಕಟ್ಟಡವೊಂದರಲ್ಲಿ ಸೋಮವಾರ ಅಗ್ನಿ ಅನಾಹುತ ಸಂಭವಿಸಿ, ಹಲವು ಅಂಗಡಿಗಳು ಭಸ್ಮವಾಗಿವೆ.
ಪಟಾಕಿ ಅಂಗಡಿಯೊಂದರಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು ಬಳಿಕ ವಿವಿಧ ಅಂಗಡಿಗಳಿಗೆ ವ್ಯಾಪಿಸಿದೆ ಎಂದು ಮೂಲಗಳು ತಿಳಿಸಿವೆ.
ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪಿ ಬೆಂಕಿ ನಂದಿಸಿದ್ದಾರೆ.
ಹಲವು ಅಂಗಡಿಗಳಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಸೊತ್ತುಗಳು ನಾಶವಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.