ADVERTISEMENT

ಉಡುಪಿ | ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರಣಾರ್ಥ ರಕ್ತದಾನ ಶಿಬಿರ ನಿರ್ಮಾಣವಾಗಲಿ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2025, 5:38 IST
Last Updated 12 ಸೆಪ್ಟೆಂಬರ್ 2025, 5:38 IST
<div class="paragraphs"><p>ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರಣಾರ್ಥ ನಡೆದ ಕಾರ್ಯಕ್ರಮವನ್ನು ಶಾಸಕ ಯಶ್‌ಪಾಲ್‌ ಸುವರ್ಣ ಉದ್ಘಾಟಿಸಿದರು.</p></div>

ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರಣಾರ್ಥ ನಡೆದ ಕಾರ್ಯಕ್ರಮವನ್ನು ಶಾಸಕ ಯಶ್‌ಪಾಲ್‌ ಸುವರ್ಣ ಉದ್ಘಾಟಿಸಿದರು.

   

ಉಡುಪಿ: ಅರಣ್ಯ ಇಲಾಖೆಯಲ್ಲಿ ಹುತಾತ್ಮರಾದವರ ಸ್ಮರಣಾರ್ಥ ಜಿಲ್ಲೆಯಲ್ಲೂ ಹುತಾತ್ಮರ ಭವನ ನಿರ್ಮಿಸಬೇಕು ಎಂದು ಶಾಸಕ ಯಶ್‌ಪಾಲ್‌ ಸುವರ್ಣ ಹೇಳಿದರು.

ಉಪ ವಲಯ ಅರಣ್ಯಾಧಿಕಾರಿಗಳ ಸಂಘ ಹಾಗೂ ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘದ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆ ಮತ್ತು ಐಎಂಎ ಸಹಯೋಗದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರಣಾರ್ಥ ನಗರದ ಐಎಂಎ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.

ADVERTISEMENT

ಸಾಮಾಜಿಕ ಅರಣ್ಯ ಯೋಜನೆಯ ಮೂಲಕ ಅರಣ್ಯ ಇಲಾಖೆಯು ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದೆ. ಜೊತೆಗೆ ರಕ್ತದಾನದ ಮೂಲಕ ಸಾಮಾಜಿಕ ಕಾರ್ಯದಲ್ಲೂ ನಿರತವಾಗಿರುವುದು ಶ್ಲಾಘನೀಯ ಎಂದರು.

ಕುಂದಾಪುರ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ. ಮಾತನಾಡಿ, ನೈಸರ್ಗಿಕ ಸಂಪನ್ಮೂಲದ ಮೇಲೆ ಅತೀವ ಒತ್ತಡವಿರುವ ಸಂದರ್ಭದಲ್ಲಿ ನಾವಿದ್ದೇವೆ. ಅರಣ್ಯ ಸಂರಕ್ಷಣೆ ಕಾರ್ಯವೂ ಹೆಚ್ಚು ಸವಾಲಿನ ಕೆಲಸವಾಗಿದೆ ಎಂದು ಹೇಳಿದರು.

ಅರಣ್ಯ ಸಂಪತ್ತಿನ ರಕ್ಷಣೆಗಾಗಿ ಹುತಾತ್ಮರಾದವರ ಸ್ಮರಣೆಯನ್ನು ರಕ್ತದಾನದಂತಹ ಸಾಮಾಜಿಕ ಕಾರ್ಯದ ಮೂಲಕ ಮಾಡುತ್ತಿರುವುದು ಹೆಚ್ಚು ಅರ್ಥಪೂರ್ಣವಾಗಿದೆ ಎಂದರು.

ಕುದುರೆಮುಖ ವನ್ಯಜೀವಿ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಶಿವರಾಂ ಬಾಬು ಎಂ. ಮಾತನಾಡಿ, ದಟ್ಟಾರಣ್ಯದಲ್ಲಿ ಗಸ್ತು ಕೆಲಸ ನಿರ್ವಹಿಸುವ ಸಿಬ್ಬಂದಿ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದರು.

ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯ ಸಿಬ್ಬಂದಿಗೆ ಪೋಸ್ಟಲ್‌ ಜೀವವಿಮೆ ಸೌಲಭ್ಯವನ್ನು ಮಾಡಿದ್ದೇವೆ ಎಂದರು.

ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘದ ಅಧ್ಯಕ್ಷ ಕೇಶವ ಪೂಜಾರಿ ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು.

ಉಪ ವಲಯ ಅರಣ್ಯ ಅಧಿಕಾರಿಗಳ ಸಂಘದ ಅಧ್ಯಕ್ಷ ನಾಗೇಶ್ ಬಿಲ್ಲವ, ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ನಿತ್ಯಾನಂದ ನಾಯಕ್, ಐಎಂಎ ಉಡುಪಿ ಅಧ್ಯಕ್ಷ ಡಾ. ಕಲ್ಯಾ ಸುರೇಶ್ ಶೆಣೈ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದಿನಕರ್ ಶೆಟ್ಟಿ ಅಂಪಾರು, ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘದ ಗೌರವಾಧ್ಯಕ್ಷ ಎಚ್. ದೇವರಾಜ ಪಾಣ, ಪ್ರಕಾಶ್‌ ಪೂಜಾರಿ, ಶ್ರೀಧರ್‌ ಪಿ., ಕಿರಣ್‌ ಕುಮಾರ್‌ ಉಪಸ್ಥಿತರಿದ್ದರು. ರವಿ ಸ್ವಾಗತಿಸಿದರು.

ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರಣಾರ್ಥ ನಡೆದ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ರಕ್ತದಾನ ಮಾಡಿದರು
ಉಡುಪಿ ಜಿಲ್ಲೆಯಲ್ಲಿ ರಕ್ತದಾನಿಗಳ ಕೊರತೆಯಿಲ್ಲ ಇದು ರಕ್ತದಾನಿಗಳ ಜಿಲ್ಲೆ. ದಾನಿಗಳು ತುರ್ತು ಸಂದರ್ಭದಲ್ಲಿ ಕರೆ ಬಂದಾಗ ಸ್ಪಂದಿಸಿ ರಕ್ತದಾನ ಮಾಡಬೇಕು.
ಡಾ. ವೀಣಾ ಕುಮಾರಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.