
ಉಡುಪಿ: ಉಡುಪಿಯ ಕೃಷ್ಣಮಠದಲ್ಲಿಇದೇ 28ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಳ್ಳುವ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಲಿರುವ ಸುವರ್ಣ ತೀರ್ಥ ಮಂಟಪದ ಶಿಖರ ಪ್ರತಿಷ್ಠೆ ಹಾಗೂ ಕಲಶಾಭಿಷೇಕ ಗುರುವಾರ ನೆರವೇರಿತು.
ಸುವರ್ಣ ತೀರ್ಥ ಮಂಟಪದ ಶಿಖರ ಪ್ರತಿಷ್ಠೆ ನೆರವೇರಿಸಿದ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ಕಲಶಾಭಿಷೇಕ ಮಾಡಿ, ಪೂಜೆ ಸಲ್ಲಿಸಿದರು.
ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರ ಸನ್ಯಾಸ ದೀಕ್ಷೆಯ ಸುವರ್ಣ ಮಹೋತ್ಸವದ ಅಂಗವಾಗಿ ಕೃಷ್ಣ ಮಠದ ಒಳಗಿನ ತೀರ್ಥಮಂಟಪವನ್ನು ಸುವರ್ಣ ತೀರ್ಥ ಮಂಟಪವನ್ನಾಗಿ ಮಾಡಲಾಗಿದೆ.
28ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿಗೆ ಬರಲಿರುವ ಮೋದಿ ಅವರು 11.30 ರವರೆಗೆ 1.5 ಕಿ.ಮೀ. ರೋಡ್ ಶೋ ನಡೆಸಿ ಬಳಿಕ ಶ್ರೀಕೃಷ್ಣ ಮಠಕ್ಕೆ ತೆರಳುವವರು. ಪ್ರಧಾನಿ ಭೇಟಿಯ ಕಾರಣ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.