ಉಡುಪಿ: ನಗರದ ಮಿಷನ್ ಕಾಂಪೌಂಡ್ ಬಳಿಯ ಸರ್ಕಾರಿ ವಸತಿ ಸಮುಚ್ಚಯಕ್ಕೆ ಶನಿವಾರ ರಾತ್ರಿ ನುಗ್ಗಿದ ಕಳ್ಳರು ಸೊತ್ತುಗಳನ್ನು ಕಳವು ಮಾಡಿದ್ದಾರೆ.
ಕಂದಾಯ ಇಲಾಖೆಗೆ ಸಂಬಂಧಿಸಿದ ಈ ವಸತಿ ಸಮುಚ್ಚಯದ ಕೆಲವು ಮನೆಗಳ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ನಗದು ಹಾಗೂ ಸೊತ್ತುಗಳನ್ನು ಕಳವು ಮಾಡಿದ್ದಾರೆ. ಕೆಲವು ಮನೆಗಳಿಂದ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಕಳ್ಳರ ಚಲನವಲನಗಳು ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ದಾಖಲಾಗಿದೆ.
ಇದೇ ವಸತಿ ಸಮುಚ್ಚಯದ ಆರು ಮನೆಗಳಿಗೆ ಕಳೆದ ಸೆಪ್ಟೆಂಬರ್‌ನಲ್ಲಿ ನುಗ್ಗಿದ್ದ ಕಳ್ಳರು ನಗ–ನಗದು ಕಳವು ಮಾಡಿದ್ದರು. ಆ ಸಂಬಂಧ ಪೊಲೀಸರು ಇದುವರೆಗೆ ಯಾರನ್ನೂ ಬಂಧಿಸಿಲ್ಲ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.