ADVERTISEMENT

ಉಡುಪಿ | ಗ್ರಾ.ಪಂ. ಸೇವೆ ಸ್ಥಗಿತ: ಜನರ ಪರದಾಟ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನೌಕರರ ಧರಣಿ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2024, 4:52 IST
Last Updated 9 ಅಕ್ಟೋಬರ್ 2024, 4:52 IST
ಗ್ರಾಮ ಪಂಚಾಯಿತಿ ಅಧಿಕಾರಿಗಳು, ನೌಕರರ ಧರಣಿ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರ ಭೇಟಿ ನೀಡಿದರು
ಗ್ರಾಮ ಪಂಚಾಯಿತಿ ಅಧಿಕಾರಿಗಳು, ನೌಕರರ ಧರಣಿ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರ ಭೇಟಿ ನೀಡಿದರು   

ಉಡುಪಿ: ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು, ನೌಕರರ ಹಾಗೂ ಸದಸ್ಯರ ಪ್ರತಿಭಟನೆಯು ಮಂಗಳವಾರವೂ ಮುಂದುವರಿದಿದ್ದು, ಜಿಲ್ಲೆಯ ಎಲ್ಲ ಪಂಚಾಯಿತಿಗಳ ಸೇವೆಯು ಸ್ಥಗಿತಗೊಂಡಿದ್ದು, ಸಾರ್ವಜನಿಕರು ಪರದಾಡಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನೌಕರರು ಧರಣಿ ನಡೆಸುವ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್‌ ಸದಸ್ಯ ಮಂಜುನಾಥ್‌ ಭಂಡಾರಿ, ಶಾಸಕ ಯಶ್‌ಪಾಲ್‌ ಸುವರ್ಣ,ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮೊದಲಾದವರು ಭೇಟಿ ನೀಡಿದರು.

ನೌಕರರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಜನಪ್ರತಿನಿಧಿಗಳು ಭರವಸೆ ನೀಡಿದರು.

ADVERTISEMENT

ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಪಿ. ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ರಾವ್‌ ಮತ್ತಿತರರು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಾಯ:

ರಾಜ್ಯದ ಸರಿಸುಮಾರು 6 ಸಾವಿರದಷ್ಟು ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿಯ ಮುಷ್ಕರದಿಂದಾಗಿ ಕೆಲಸ ಸ್ಥಗಿತಗೊಂಡಿದ್ದು, ಮುಖ್ಯಮಂತ್ರಿ ಮಧ್ಯಪ್ರವೇಶಿಸಿ ಸಂಘಟನೆಯ ಮುಖಂಡರನ್ನು ಕರೆದು ಸಮಸ್ಯೆ ಬಗೆಹರಿಸಬೇಕೆಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.