ADVERTISEMENT

ಉಡುಪಿ | ಬಾಲಕಿಗೆ ಲೈಂಗಿಕ ಕಿರುಕುಳ: ತ್ವರಿತ ಕ್ರಮಕ್ಕೆ ಸಚಿವೆ ಹೆಬ್ಬಾಳಕರ ಸೂಚನೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2025, 5:19 IST
Last Updated 25 ಜನವರಿ 2025, 5:19 IST
ಲಕ್ಷ್ಮೀ ಹೆಬ್ಬಾಳಕರ
ಲಕ್ಷ್ಮೀ ಹೆಬ್ಬಾಳಕರ   

ಬೆಳಗಾವಿ: ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೂಚನೆ ನೀಡಿದ್ದಾರೆ.

ಅಪಘಾತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ, ಘಟನೆಯ ಮಾಹಿತಿ ಬಂದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಘಟನೆಯ ವಿವರ ಪಡೆದರು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ತಕ್ಷಣ ಪತ್ತೆ ಹಚ್ಚಬೇಕು. ಜೊತೆಗೆ, ಬಾಲಕಿಗೆ ಅಗತ್ಯವಾದ ಎಲ್ಲ ನೆರವನ್ನು ನೀಡಬೇಕು ಎಂದು ಸಚಿವರು ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಸೂಚನೆ ನೀಡಿದರು

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.