ADVERTISEMENT

ಉಡುಪಿ | ಮನೆಗೆ ನುಗ್ಗಿ ವ್ಯಕ್ತಿಯ ಕೊಲೆ; ಸ್ನೇಹಿತರಿಂದಲೇ ಕೃತ್ಯ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 6:01 IST
Last Updated 13 ಆಗಸ್ಟ್ 2025, 6:01 IST
   

ಉಡುಪಿ: ವ್ಯಕ್ತಿಯೊಬ್ಬರನ್ನು ಮನೆಗೆ ನುಗ್ಗಿ ಸ್ನೇಹಿತರೇ ಹತ್ಯೆ ಮಾಡಿದ ಘಟನೆ ಉಡುಪಿಯ ಪುತ್ತೂರು ಗ್ರಾಮದ ಸುಬ್ರಮಣ್ಯ ನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಸುಬ್ರಹ್ಮಣ್ಯ ನಗರ ನಿವಾಸಿ ವಿನಯ್ ದೇವಾಡಿಗ (40) ಕೊಲೆಯಾದವರು. ಈ ಸಂಬಂಧ ಬ್ರಹ್ಮಾವರ ಕೊಕ್ಕರ್ಣಿಯ ಅಜಿತ್ (28), ಅಕ್ಷೇಂದ್ರ (34), ಹಾಗೂ ಪ್ರದೀಪ ಆಚಾರ್ಯ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಪೇಂಟಿಂಗ್ ಕೆಲಸ ಮಾಡುತ್ತಿದ್ದ ವಿನಯ್ ಅವರು ಮನೆಯ ಕೋಣಿಯಲ್ಲಿ ಮಲಗಿದ್ದ ವೇಳೆ, ಮನೆಗೆ ನುಗ್ಗಿದ ಮೂವರು ಆರೋಪಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ADVERTISEMENT

ಆರೋಪಿಯೊಬ್ಬನಿಗೆ ಸಂಬಂಧಿಸಿದ ಆಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.