ಉಡುಪಿ: ಇಲ್ಲಿನ ಶ್ರೀ ಕೃಷ್ಣ ಮಠದ ರಥ ಬೀದಿಯಲ್ಲಿ ವಿವಾಹಪೂರ್ವ (ಪ್ರಿ ವೆಡ್ಡಿಂಗ್) ಮತ್ತು ವಿವಾಹ ನಂತರದ (ಪೋಸ್ಟ್ ವೆಡ್ಡಿಂಗ್) ಫೋಟೊ ಶೂಟ್ ನಡೆಸುವುದನ್ನು ಪರ್ಯಾಯ ಪುತ್ತಿಗೆ ಮಠ ನಿರ್ಬಂಧಿಸಿದೆ.
‘ರಥ ಬೀದಿಯಲ್ಲಿ ಪಾರಂಪರಿಕ ಕಟ್ಟಡಗಳಿವೆ. ಫೋಟೋಶೂಟ್ ಹೆಸರಿನಲ್ಲಿ ಅಲ್ಲಿ ಅಸಭ್ಯ ವರ್ತನೆ ಕಾಣಿಸುತ್ತಿದೆ, ಪ್ರೇಮ ಸಲ್ಲಾಪ ನಡೆಯುತ್ತಿದೆ. ಕೇರಳ, ಬೆಂಗಳೂರು ಮೊದಲಾದ ಕಡೆಯಿಂದ ಬರುವ ಫೋಟೋಗ್ರಾಫರ್‌ಗಳ ಹಾವಳಿ ಹೆಚ್ಚಾಗಿದೆ. ಹೀಗಾಗಿ ಈ ಕ್ರಮವನ್ನು ಕೈಗೊಳ್ಳಲಾಗುತ್ತಿದೆ’ ಎಂದು ಮಠದ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.