ಆರೋಪಿ, ಗಣೇಶ ಪೂಜಾರಿ
ಉಡುಪಿ: ಹೆಂಡತಿ ವಿಪರೀತ ಮೊಬೈಲ್ ಬಳಸುತ್ತಾಳೆಂದು ಸಿಟ್ಟುಗೊಂಡ ಪತಿ, ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಬ್ರಹ್ಮಾವರ ತಾಲ್ಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.
ಹೊಸಮಠ ನಿವಾಸಿ ರೇಖಾ ಕೊಲೆಯಾದ ಮಹಿಳೆ. ಈಕೆಯ ಪತಿ ಗಣೇಶ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪತ್ನಿ ಯಾವಾಗಲೂ ವಿಪರೀತ ಮೊಬೈಲ್ ಉಪಯೋಗಿಸುತ್ತಾಳೆಂದು ಸಿಟ್ಟಿನಿಂದ ಮದ್ಯಪಾನ ಮಾಡಿಕೊಂಡು ಬಂದು ಜಗಳವಾಡಿ, ಆರೋಪಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.