ADVERTISEMENT

ಉಡುಪಿ: ಪರಶುರಾಮ ಥೀಮ್ ಪಾರ್ಕ್ ಅಕ್ರಮ; ನಿರ್ಮಿತಿ ಕೇಂದ್ರದ ಅರುಣ್ ಕುಮಾರ್ ಅಮಾನತು

​ಪ್ರಜಾವಾಣಿ ವಾರ್ತೆ
Published 25 ಜುಲೈ 2024, 6:48 IST
Last Updated 25 ಜುಲೈ 2024, 6:48 IST
<div class="paragraphs"><p>ಅರುಣ್ ಕುಮಾರ್</p></div>

ಅರುಣ್ ಕುಮಾರ್

   

ಉಡುಪಿ: ಕಾರ್ಕಳದ ಪರಶುರಾಮ ಥೀಂ ಪಾರ್ಕ್‌ ನಿರ್ಮಾಣ ಕಾಮಗಾರಿಯ ಅವ್ಯವಹಾರಕ್ಕೆ ಸಂಬಂಧಿಸಿ, ಕಾಮಗಾರಿಯನ್ನು ನಿರ್ವಹಿಸಿದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್‌ ಕುಮಾರ್‌ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಉಮಿಕಲ್‌ ಬೆಟ್ಟದಲ್ಲಿ ನಿರ್ಮಿಸಿರುವ ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿ ಪೂರ್ಣಗೊಳಿಸದೇ, ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರ ಮಾಡದೇ, ಉದ್ಘಾಟನಾ ಕಾರ್ಯಕ್ರಮ ಮಾಡಿರುವ ಆರೋಪದಡಿ ಅವರನ್ನು ಅಮಾನತು ಮಾಡಲಾಗಿದೆ.

ADVERTISEMENT

ಥೀಮ್‌ ಪಾರ್ಕ್‌ ನಿರ್ಮಾಣಕ್ಕೆ ₹ 11.5 ಕೋಟಿ ಮಂಜೂರಾಗಿ ₹6.72 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಆದರೆ ತರಾತುರಿಯಲ್ಲಿ ಉದ್ಘಾಟಿಸಿದ ಕಾರಣ ಕಾಮಗಾರಿಯ ಗುಣಮಟ್ಟ ಮತ್ತು ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪರ–ವಿರೋಧ ಚರ್ಚೆಗಳು ನಡೆಯುತ್ತಿವೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಈ ಕಾಮಗಾರಿಯ ಬಗ್ಗೆ ಪೊಲೀಸ್‌ ಇಲಾಖೆ ಹಾಗೂ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನದಾಸ್‌ ವಿಚಾರಣಾ ಆಯೋಗ ತನಿಖೆ ನಡೆಸುತ್ತಿದ್ದು, ತನಿಖೆಗೆ ಅಡ್ಡಿ ಉಂಟಾಗುವ ಸಾಧ್ಯತೆ ಇರುವುದರಿಂದ ಆಡಳಿತಾತ್ಮಕ ಹಿತದೃಷ್ಟಿಯಿಂದ ಅರುಣ್‌ ಕುಮಾರ್‌ ಅವರನ್ನು ಅಮಾನತು ಮಾಡಲಾಗಿದೆ ಎಂದೂ ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.