ಬಂಧನ
(ಪ್ರಾತಿನಿಧಿಕ ಚಿತ್ರ)
ಉಡುಪಿ: ಕಾರ್ಕಳದ ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್‌ನ ಶೌಚಾಲಯದ ಗೋಡೆಯಲ್ಲಿ ಪ್ರಚೋದನಕಾರಿ ಬರಹ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರ್ಥಿನಿಯನ್ನು ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಕಾಲೇಜಿನ ವಿದ್ಯಾರ್ಥಿನಿ ಫಾತಿಮಾ ಶಬ್ನಾ (21) ಬಂಧಿತರು. ಆರೋಪಿ. ಮೇ 7ರಂದು ಹಾಸ್ಟೆಲ್‌ನ ಶೌಚಾಲಯದ ಕೊಠಡಿ ಗೋಡೆಯಲ್ಲಿ ಎರಡು ಸಮುದಾಯಗಳ ನಡುವೆ ದ್ವೇಷ ಹರಡುವ ರೀತಿಯಲ್ಲಿ ಬರಹ ಬರೆದಿರುವ ಕುರಿತು ಹಾಸ್ಟೆಲ್ ಮ್ಯಾನೇಜರ್ ಪೊಲೀಸರಿಗೆ ದೂರು ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.