ADVERTISEMENT

ಉಡುಪಿ: ಮ್ಯಾರಥಾನ್‌ ವೇಳೆ ಕುಸಿದು ಬಿದ್ದು ಪಿಎಸ್‌ಐ ಸಾವು

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2026, 4:57 IST
Last Updated 1 ಮಾರ್ಚ್ 2026, 4:57 IST
   

ಉಡುಪಿ: ಜಿಲ್ಲಾ ಪೊಲೀಸ್ ವತಿಯಿಂದ ಉಡುಪಿಯಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಮ್ಯಾರಥಾನ್‌ನಲ್ಲಿ ಪಾಲ್ಗೊಂಡಿದ್ದ ವೇಳೆ ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್ಐ ನಾಸೀರ್ ಹುಸೇನ್ (58) ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಮಾದಕ ವಸ್ತು ವಿರುದ್ಧ ಜಾಗೃತಿಗಾಗಿ 5 ಕಿ.ಮೀ ಮ್ಯಾರಥಾನ್ ಓಟವನ್ನು ನಗರದ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಮ್ಯಾರಥಾನ್ ಓಡುತ್ತಿದ್ದಾಗ ನಾಸೀರ್ ಹುಸೇನ್ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲೇ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ADVERTISEMENT

ನಾಸಿರ್‌ ಹುಸೇನ್‌ ಅವರು ಜಿಲ್ಲೆಯ ಅಮಾಸೆಬೈಲು, ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, ಶಂಕರನಾರಾಯಣ, ಕಾರ್ಕಳ ಗ್ರಾಮಾಂತರ ಠಾಣೆ ಸೇರಿದಂತೆ ವಿವಿಧ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.