ಉಡುಪಿ: ಜಿಲ್ಲೆಯಾದ್ಯಂತ ಶುಕ್ರವಾರವೂ ಮಳೆ ಮುಂದುವರಿದಿದ್ದು, ಹಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿದೆ.
ದಿನವಿಡೀ ಬಿಟ್ಟು ಬಿಟ್ಟು ಬಿರುಸಿನ ಮಳೆ ಸುರಿದ ಪರಿಣಾಮವಾಗಿ ನಗರ ವ್ಯಾಪ್ತಿ ಸೇರಿದಂತೆ ಹಲವೆಡೆ ರಸ್ತೆಗಳಲ್ಲಿ ಮಳೆ ನೀರು ಸಂಗ್ರಹವಾಗಿ ವಾಹನ ಸವಾರರಿಗೆ ತೊಂದರೆಯಾಯಿತು.
ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕಾರ್ಕಳದಲ್ಲಿ 7 ಸೆಂ.ಮೀ., ಕುಂದಾಪುರದಲ್ಲಿ 10 ಸೆಂ.ಮೀ., ಉಡುಪಿಯಲ್ಲಿ 11 ಸೆಂ.ಮೀ., ಬೈಂದೂರಿನಲ್ಲಿ 11 ಸೆಂ.ಮೀ., ಬ್ರಹ್ಮಾವರದಲ್ಲಿ 13 ಸೆಂ.ಮೀ., ಕಾಪುವಿನಲ್ಲಿ 10 ಸೆಂ.ಮೀ., ಹೆಬ್ರಿಯಲ್ಲಿ 7 ಸೆಂ. ಮೀ. ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.