ADVERTISEMENT

ಗೂಡುದೀಪ: ರಕ್ಷಿತ್‌ ಕುಮಾರ್ ಪ್ರಥಮ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2022, 8:37 IST
Last Updated 28 ಅಕ್ಟೋಬರ್ 2022, 8:37 IST
ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ವತಿಯಿಂದ ಭಾನುವಾರ ಕಾಪು ಬೀಚ್‌ನಲ್ಲಿ ಆಯೋಜಿಸಿದ್ದ ಗೂಡುದೀಪ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ರಕ್ಷಿತ್ ಕುಮಾರ್ ಕಾಪಿಕಾಡ್ ಪಡೆದುಕೊಂಡರು.
ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ವತಿಯಿಂದ ಭಾನುವಾರ ಕಾಪು ಬೀಚ್‌ನಲ್ಲಿ ಆಯೋಜಿಸಿದ್ದ ಗೂಡುದೀಪ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ರಕ್ಷಿತ್ ಕುಮಾರ್ ಕಾಪಿಕಾಡ್ ಪಡೆದುಕೊಂಡರು.   

ಕಾಪು (ಪಡುಬಿದ್ರಿ): ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ವತಿಯಿಂದ ಭಾನುವಾರ ಕಾಪು ಬೀಚ್‌ನಲ್ಲಿ ಆಯೋಜಿಸಿದ್ದ ಗೂಡುದೀಪ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ರಕ್ಷಿತ್ ಕುಮಾರ್ ಕಾಪಿಕಾಡ್ ಪಡೆದುಕೊಂಡರು.

ದ್ವಿತೀಯ ಬಹುಮಾನವನ್ನು ರವಿರಾಜ್ ಮಂಗಳೂರು, ತೃತೀಯ ಬಹುಮಾನ ಉಮೇಶ್ ಕಾವೂರು ಪಡೆದುಕೊಂಡರು. ಕಲಾವಿದರಾದ ಶಶಾಂಕ್, ರಕ್ಷಾ ಮತ್ತು ಯಶವಂತ್ ಗೂಡುದೀಪ ಸ್ಪರ್ಧೆಯ ತೀರ್ಪುಗಾರರಾಗಿ ಭಾಗವಹಿಸಿದ್ದರು. ವಿವಿಧ ರೀತಿಯ ಗೂಡುದೀಪಗಳು ತೀರ್ಪುದಾರರ ಮೆಚ್ಚುಗೆಗೆ ಪಾತ್ರವಾದವು.

ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಮಾತನಾಡಿ, ‘ಸಂಪ್ರದಾಯ ಉಳಿಸುವ ನಿಟ್ಟಿನಲ್ಲಿ ಇಂತಹ ಸ್ಪರ್ಧೆಗಳು ಅನಿವಾರ್ಯ’ ಎಂದು ಶಂಕರ ಪ್ರತಿಷ್ಠಾನದ ಕಾರ್ಯವನ್ನು ಶ್ಲಾಘಿಸಿದರು.

ADVERTISEMENT

ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ಟ್ರಸ್ಟಿ ಶ್ರೀಶ ನಾಯಕ್ ಮಾತನಾಡಿ, ‘ಪ್ರತಿವರ್ಷ ಸಮಾಜಮುಖಿ ಕಾರ್ಯದಲ್ಲಿ ತೊಡಗಿರುವ ನಮ್ಮ ಟ್ರಸ್ಟ್ ತಂದೆಯ ಆಶಯದಂತೆ ನಡೆಯುತ್ತಿದೆ. ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ ಜನರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ’ ಎಂದರು.

ಆರೋಗ್ಯ ಮತ್ತು ಗೃಹ ನಿರ್ಮಾಣಕ್ಕಾಗಿ ಟ್ರಸ್ಟ್ ವತಿಯಿಂದ ಧನಸಹಾಯ ವಿತರಿಸಲಾಯಿತು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ಉದಯ ಕುಮಾರ್ ಶೆಟ್ಟಿ, ಶಾಸಕ ಲಾಲಾಜಿ ಆರ್ ಮೆಂಡನ್, ಶ್ರೀಕಾಂತ ನಾಯಕ್, ಕುತ್ಯಾರು ನವೀನ್ ಶೆಟ್ಟಿ, ವೀಣಾ ಶೆಟ್ಟಿ, ದಿನೇಶ್ ಮೆಂಡನ್, ಗಂಗಾಧರ ಸುವರ್ಣ, ಶಿಲ್ಪಾ ಸುವರ್ಣ, ಮಿಥುನ್ ಹೆಗ್ಡೆ, ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ಅನಿಲ್ ಶೆಟ್ಟಿ, ಸ್ವೀಕಾರ್ ನಾಯಕ್ ಇದ್ದರು.

ಯಶವಂತ್ ನಿರೂಪಿಸಿದರು. ಸಂತೋಷ್ ಕುಮಾರ್ ಮೂಡುಬೆಳ್ಳೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.