ADVERTISEMENT

ಉಡುಪಿ: ಅತ್ಯಾಚಾರ ಆರೋಪಿಗೆ ನ್ಯಾಯಾಂಗ ಬಂಧನ

​ಪ್ರಜಾವಾಣಿ ವಾರ್ತೆ
Published 7 ಜುಲೈ 2025, 4:23 IST
Last Updated 7 ಜುಲೈ 2025, 4:23 IST
<div class="paragraphs"><p>ಬಂಧನ </p></div>

ಬಂಧನ

   

ಉಡುಪಿ: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಆರೋಪದಲ್ಲಿ ಉಡುಪಿಯ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದ ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಕೊಳಲಗಿರಿಯ ಗ್ರಾಮದ ಸಂಜಯ್‌ ಕರ್ಕೇರ (28) ನ್ಯಾಯಾಂಗ ಬಂಧನಕ್ಕೊಳಗಾಗಿರುವ ಆರೋಪಿ

ADVERTISEMENT

ಸಂಜಯ್‌ ಎರಡು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದು, 2024 ಜು.11ರಂದು ಕಳಸದ ಹೊಟೇಲ್‌ಗೆ ಕರೆದುಕೊಂಡು ಹೋಗಿ ರೂಂ ಮಾಡಿದ್ದು, ಅಲ್ಲಿ ಆಕೆಗೆ ಜ್ಯೂಸ್‌ನಲ್ಲಿ ಮತ್ತು ಬರುವ ವಸ್ತುವನ್ನು ಬೆರೆಸಿ ಕುಡಿಸಿದ್ದನು. ಇದರಿಂದ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಆಕೆಯೊಂದಿಗೆ ದೈಹಿಕ ಸಂಪರ್ಕ ನಡೆಸಿದ್ದನು ಎಂದು ದೂರಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.