ADVERTISEMENT

ಉಡುಪಿ | ಶರಣರ ತತ್ವಾದರ್ಶ ಪಾಲಿಸಿ: ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

​ಪ್ರಜಾವಾಣಿ ವಾರ್ತೆ
Published 10 ಮೇ 2025, 14:10 IST
Last Updated 10 ಮೇ 2025, 14:10 IST
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ ನಡೆಯಿತು
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ ನಡೆಯಿತು   

ಉಡುಪಿ: ಸಮಾಜದ ಏಳಿಗೆಗಾಗಿ ಶ್ರಮಿಸಿದ್ದ ಸಂತರು, ಶರಣರು ಹಾಗೂ ಮಹಾನ್ ವ್ಯಕ್ತಿಗಳ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಮುಂದಿನ ಪೀಳಿಗೆಗೆ ಪಸರಿಸುವ ಕಾರ್ಯವಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ವಚನಗಳ ಸಾರ, ಧರ್ಮ ನಿಷ್ಠೆ ಎಲ್ಲರಿಗೂ ಮಾದರಿಯಾಗಿದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜೀವನದಲ್ಲಿ ಬಂದ ಕಷ್ಟಗಳನ್ನು ಎದುರಿಸಿ, ಸಾಧನೆ ಮಾಡುವ ಮೂಲಕ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಹೇಳಿದರು.

ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥೆ ರತ್ನಮಾಲ ಅವರು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದಬಸಯ್ಯ ಚಿಕ್ಕಮಠ, ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷ ಪ್ರಕಾಶ್ ಸಜ್ಜನ್, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಹೇಮರೆಡ್ಡಿ ಮಲ್ಲಮ್ಮ ಅಭಿಮಾನಿ ಬಳಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. ವರ್ಷಾ ಬಿ. ಕೋಟ್ಯಾನ್ ನಿರೂಪಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.