ಉಡುಪಿ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್‌ನಲ್ಲಿ (ಮಾಹೆ) ಗಣರಾಜ್ಯೋತ್ಸವ ಕಾರ್ಯಕ್ರಮ ಭಾನುವಾರ ಜರುಗಿತು.
ಕೆಎಂಸಿ ಗ್ರೀನ್ಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಹೆಯ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ ಅವರು ಧ್ವಜಾರೋಹಣ ನೆರವೇರಿಸಿದರು. ಮಾಹೆಯ ಆರೋಗ್ಯ ವಿಜ್ಞಾನಗಳ ಸಹ-ಕುಲಪತಿ ಡಾ. ಶರತ್ ಕೆ. ರಾವ್ ಗಣರಾಜ್ಯೋತ್ಸವದ ಸಂದೇಶ ನೀಡಿದರು.
ಕುಲಪತಿ ಲೆಫ್ಟಿನೆಂಟ್ ಜನರಲ್ ಎಂ.ಡಿ.ವೆಂಕಟೇಶ್, ಡಾ. ನಾರಾಯಣ ಸಭಾಹಿತ್, ಡಾ. ರವಿರಾಜ ಎನ್.ಎಸ್., ಡಾ. ಗಿರಿಧರ್ ಪಿ. ಕಿಣಿ ಇದ್ದರು.
ಡಾ. ಶ್ರೀನಿವಾಸ್ ಮುತಾಲಿಕ್ ಅವರ ಸ್ವಾಗತಿಸಿದರು. ಡಾ. ಏಂಜೆಲ್ ಟ್ರೀಸಾ ಅಲೆಕ್ಸ್ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.