ಅಪಘಾತ
–ಪ್ರಾತಿನಿಧಿಕ ಚಿತ್ರ
ಕಾಪು (ಪಡುಬಿದ್ರಿ): ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿಯಲ್ಲಿ ರಸ್ತೆ ದಾಟುತ್ತಿದ್ದ ವೃದ್ಧರೊಬ್ಬರಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾರು ಡಿಕ್ಕಿಯಾಗಿದ್ದು, ಸ್ಥಳಿಯ ನಿವಾಸಿ ಪೀರ್ ಸಾಹೇಬ್ (70) ಮೃತಪಟ್ಟವರು. ತೀವ್ರ ಗಾಯಗೊಂಡ ಅವರನ್ನು ಉಡುಪಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಮೃತಪಟ್ಟಿದ್ದಾರೆ.
ಗಾಯಾಳುವನ್ನು ಉಚ್ಚಿಲದ ಜಲಾಲುದ್ದೀನ್ ಅವರು ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆದೊಯ್ದರು. ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.