ADVERTISEMENT

ಉಡುಪಿ: ಸರ್ವಜ್ಞ ಪೀಠಾರೋಹಣ ಮಾಡಿದ ಶೀರೂರು ಶ್ರೀ

​ಪ್ರಜಾವಾಣಿ ವಾರ್ತೆ
Published 18 ಜನವರಿ 2026, 2:28 IST
Last Updated 18 ಜನವರಿ 2026, 2:28 IST
   

ಉಡುಪಿ: ಶೀರೂರು ಮಠಾಧೀಶ ವೇದವರ್ಧನ ತೀರ್ಥ ಸ್ವಾಮೀಜಿ ಅವರು ಭಾನುವಾರ ಬೆಳಗಿನ ಜಾವದ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಪ್ರಥಮ ಪರ್ಯಾಯ ಆರಂಭಿಸಿದರು.

ಪರ್ಯಾಯ ಪೂಜಾಧಿಕಾರವನ್ನು ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ಶೀರೂರು ಶ್ರೀ ಗಳಿಗೆ ಹಸ್ತಾಂತರಿಸಿದರು.

ಆದ್ದೂರಿ ಮೆರವಣಿಗೆಯ ಮೂಲಕ ಕೃಷ್ಣಮಠ ಪ್ರವೇಶಿಸಿದ ಶೀರೂರು ಶ್ರೀಗಳಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ಸ್ವಾಗತ ಕೋರಿ, ಮಧ್ವಾಚಾರ್ಯರಿಂದ ಕೊಡಮಾಡಿದ ಅಕ್ಷಯ ಪಾತ್ರೆ ಹಾಗೂ ಬೆಳ್ಳಿಯ ಸಟ್ಟುಗವನ್ನು ನೀಡಿದರು.

ADVERTISEMENT

ಬಳಿಕ ಶೀರೂರು ಶ್ರೀಗಳನ್ನು ಸರ್ವಜ್ಞ ಪೀಠದಲ್ಲಿ ಕೂರಿಸಿ, ಶುಭ ಹಾರೈಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.