ADVERTISEMENT

ಉಡುಪಿ: ಶೀರೂರು ಪರ್ಯಾಯ: ಮೇಳೈಸಿದ ಸಾಂಸ್ಕೃತಿಕ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 18:47 IST
Last Updated 17 ಜನವರಿ 2026, 18:47 IST
<div class="paragraphs"><p>ಶೀರೂರು ಪರ್ಯಾಯ: ಮೇಳೈಸಿದ ಸಾಂಸ್ಕೃತಿಕ ಕಾರ್ಯಕ್ರಮ</p></div>

ಶೀರೂರು ಪರ್ಯಾಯ: ಮೇಳೈಸಿದ ಸಾಂಸ್ಕೃತಿಕ ಕಾರ್ಯಕ್ರಮ

   

ಉಡುಪಿ: ಶೀರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಮೆರವಣಿಗೆಗೂ ಮುನ್ನ ನಗರದೆಲ್ಲೆಡೆ ಶನಿವಾರ ರಾತ್ರಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರಿಗೆ ಮುದ ನೀಡಿದವು.

ಪರ್ಯಾಯ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಮಂದಿ ಉಡುಪಿ ನಗರದಲ್ಲಿ ಸೇರಿದ್ದರು. ಕಿನ್ನಿಮುಲ್ಕಿ, ಬ್ರಹ್ಮಗಿರಿ, ಸಿಟಿ ಬಸ್‌ನಿಲ್ದಾಣ, ಸರ್ವಿಸ್‌ ಬಸ್‌ ನಿಲ್ದಾಣ ಸೇರಿದಂತೆ ಹಲವೆಡೆ ಸಾಂಸ್ಕೃತಿಕ ಕಾರ್ಯಕ್ರಮಗಳು ರಂಗೇರಿದವು.

ADVERTISEMENT

ಬ್ರಹ್ಮಗಿರಿಯ ಕಾಂಗ್ರೆಸ್‌ ಭವನದಲ್ಲಿ ಯಕ್ಷಗಾನ ನಡೆದರೆ, ಕಿನ್ನಿಮುಲ್ಕಿಯಲ್ಲಿ ನಡೆದ ಮನೋರಂಜನೆ ಕಾರ್ಯಕ್ರಮದಲ್ಲಿ ಸಿನಿಮಾ ನಟರು ಪಾಲ್ಗೊಂಡಿದ್ದರು. ಸಂಗೀತ ರಸಮಂಜರಿ ಕಾರ್ಯಕ್ರಮಗಳನ್ನೂ ಕೆಲವು ಸಂಘ ಸಂಸ್ಥೆಗಳು ಆಯೋಜಿಸಿದ್ದವು.

ರಥಬೀದಿಯಲ್ಲಿ ನಿರ್ಮಿಸಿದ್ದ ವೇದಿಕೆಯಲ್ಲೂ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಪ್ರೇಕ್ಷಕರಿಗೆ ಮುದ ನೀಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.