ADVERTISEMENT

ಕಾಪು ಮಾರಿಗುಡಿಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ

​ಪ್ರಜಾವಾಣಿ ವಾರ್ತೆ
Published 6 ಜುಲೈ 2025, 4:51 IST
Last Updated 6 ಜುಲೈ 2025, 4:51 IST
<div class="paragraphs"><p>ಕಾಪುವಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಶುಕ್ರವಾರ ಪತ್ನಿಯೊಂದಿಗೆ ಭೇಟಿ ನೀಡಿ ದೇವಿಯ ದರುಶನ ಪಡೆದರು.</p></div>

ಕಾಪುವಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಶುಕ್ರವಾರ ಪತ್ನಿಯೊಂದಿಗೆ ಭೇಟಿ ನೀಡಿ ದೇವಿಯ ದರುಶನ ಪಡೆದರು.

   

ಕಾಪು (ಪಡುಬಿದ್ರಿ): ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಶುಕ್ರವಾರ ಪತ್ನಿಯೊಂದಿಗೆ ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನಿಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅವರ ಸಮ್ಮುಖದಲ್ಲಿ ಅಮ್ಮನ ಅನುಗ್ರಹ ಪ್ರಸಾದ ನೀಡಿ ಸಮಿತಿಯ ವತಿಯಿಂದ ಗೌರವಿಸಲಾಯಿತು. ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ, ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಮಾಧವ ಆರ್. ಪಾಲನ್, ಮತ್ತಿತರರು ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.