ADVERTISEMENT

ಕೃಷ್ಣಮಠ ಭಕ್ತರ ಪ್ರವೇಶಕ್ಕೆ ಮುಕ್ತ: ದರ್ಶನ ಆರಂಭ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 13:12 IST
Last Updated 28 ಸೆಪ್ಟೆಂಬರ್ 2020, 13:12 IST
ಕೃಷ್ಣ ಮಠದಲ್ಲಿ ಸೋಮವಾರದಿಂದ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ದರ್ಶನಕ್ಕೆ ಮಾಡಲಾಗಿರುವ ಪ್ರತ್ಯೇಕ ಮಾರ್ಗವನ್ನು ಅಷ್ಟಮಠದ ಯತಿಗಳು ಭಕ್ತರ ಪ್ರವೇಶಕ್ಕೆ ಮುಕ್ತಗೊಳಿಸಿದರು.
ಕೃಷ್ಣ ಮಠದಲ್ಲಿ ಸೋಮವಾರದಿಂದ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ದರ್ಶನಕ್ಕೆ ಮಾಡಲಾಗಿರುವ ಪ್ರತ್ಯೇಕ ಮಾರ್ಗವನ್ನು ಅಷ್ಟಮಠದ ಯತಿಗಳು ಭಕ್ತರ ಪ್ರವೇಶಕ್ಕೆ ಮುಕ್ತಗೊಳಿಸಿದರು.   

ಉಡುಪಿ: ಲಾಕ್‌ಡೌನ್ ಅವಧಿಯಲ್ಲಿ ಆರು ತಿಂಗಳ ಕಾಲ ಬಂದ್ ಆಗಿದ್ದ ಕೃಷ್ಣಮಠ ಸೋಮವಾರದಿಂದ ಭಕ್ತರ ಪ್ರವೇಶಕ್ಕೆ ಮುಕ್ತವಾಗಿದೆ. ಮಧ್ಯಾಹ್ನ 2 ರಿಂದ 5ರವರೆಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಸುಮಾರು 500ಕ್ಕೂ ಹೆಚ್ಚು ಭಕ್ತರು ದರ್ಶನ ಪಡೆದರು.

ಕೃಷ್ಣ ಮಠದಲ್ಲಿ ದೇವರ ದರ್ಶನಕ್ಕಾಗಿ ಪ್ರತ್ಯೇಕ ಮಾರ್ಗದ ವ್ಯವಸ್ಥೆ ಮಾಡಲಾಗಿದ್ದು, ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು, ವಿಶ್ವಪ್ರಿಯ ತೀರ್ಥರು, ಪಲಿಮಾರು ಮಠದ ವಿದ್ಯಾಧೀಶ ತೀರ್ಥರು, ಪೇಜಾವರ ಮಠದ ವಿಶ್ವಪ್ರಸನ್ನತೀರ್ಥರು, ಕಾಣಿಯೂರು ಮಠದ ವಿದ್ಯಾವಲ್ಲಭತೀರ್ಥರು ಮಾರ್ಗವನ್ನು ಭಕ್ತರ ಪ್ರವೇಶಕ್ಕೆ ಮುಕ್ತಗೊಳಿಸಿದರು.

ದರ್ಶನಕ್ಕೆ ಸಾಗುವ ಮಾರ್ಗದಲ್ಲಿ ಸ್ಯಾನಿಟೈಸರ್ ಇಡಲಾಗಿತ್ತು. ಭಕ್ತರು ಮಾಸ್ಕ್‌ ಧರಿಸಿ ಅಂತರ ಕಾಯ್ದುಕೊಂಡು ದೇವರ ದರ್ಶನ ಪಡೆದರು ಎಂದು ಮಠದ ವ್ಯವಸ್ಥಾಪಕ ಗೋವಿಂದರಾಜ ಹೆಗ್ಡೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.