ADVERTISEMENT

ಉಡುಪಿ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 11:45 IST
Last Updated 30 ಜೂನ್ 2020, 11:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಉಡುಪಿ: ಕುಂದಾಪುರ ತಾಲ್ಲೂಕಿನ ಪರೀಕ್ಷಾ ಕೇಂದ್ರದಲ್ಲಿ ಎಸ್ಸೆಲ್ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ಸೋಮವಾರ ವಿಜ್ಞಾನ ವಿಷಯದ ಪರೀಕ್ಷೆ ಬರೆದ ಬಳಿಕ ವಿದ್ಯಾರ್ಥಿನಿಗೆ ಸೋಂಕಿನ ಲಕ್ಷಣಗಳು ಕಂಡುಬಂದಿತ್ತು. ಆಕೆಯ ಗಂಟಲದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಮಂಗಳವಾರ ಬಂದ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

ವಿದ್ಯಾರ್ಥಿನಿಗೆ ಸೋಂಕು ಹೇಗೆ ತಗುಲಿದೆ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ. ಆಕೆಯ ಕುಟುಂಬದ ಸದಸ್ಯರಿಗೆ ಸೋಂಕು ಇಲ್ಲ ಎಂದು ಡಿಎಚ್‌ಒ ಸುಧೀರ್ ಚಂದ್ರ ಸೂಡ ತಿಳಿಸಿದರು.

ADVERTISEMENT

ಸೋಂಕಿತ ವಿದ್ಯಾರ್ಥಿನಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೂರಕ ಪರೀಕ್ಷೆಯಲ್ಲಿ ಉಳಿಕೆ ವಿಷಯಗಳ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

ಎರಡು ದಿನಗಳ ಹಿಂದಷ್ಟೆ ಕಾಪು ತಾಲ್ಲೂಕಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಗೆ ಸೋಂಕು ತಗುಲಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.