ಉಡುಪಿ: ಮದುವೆಗೆ ನಿರಾಕರಿಸಿದ ಕಾರಣಕ್ಕೆ ಯುವತಿಗೆ ಯುವಕನೊಬ್ಬ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಬ್ರಹ್ಮಾವರದ ಕೊಕ್ಕರ್ಣಿಯಲ್ಲಿ ಶುಕ್ರವಾರ ನಡೆದಿದೆ.
ಕೊಕ್ಕರ್ಣೆಯ ರಕ್ಷಿತಾ (24) ಗಾಯಗೊಂಡ ಯುವತಿ. ತೀವ್ರವಾಗಿ ಗಾಯಗೊಂಡ ಯುವತಿಯನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯುವತಿ ಬಸ್ ನಿಲ್ದಾಣಕ್ಕೆ ನಡೆದು ಹೋಗುತ್ತಿದ್ದಾಗ ಯುವಕ ಚೂರಿಯಿಂದ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬ್ರಹ್ಮಾವರ ಪೋಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.