ADVERTISEMENT

ಉಡುಪಿ: ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಂ ಶೆಟ್ಟಿ ಹೃದಯಾಘಾತದಿಂದ ನಿಧನ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2024, 6:19 IST
Last Updated 14 ಡಿಸೆಂಬರ್ 2024, 6:19 IST
<div class="paragraphs"><p>ಪ್ರೀತಂ ಶೆಟ್ಟಿ </p></div>

ಪ್ರೀತಂ ಶೆಟ್ಟಿ

   

ಹೆಬ್ರಿ: ರಾಜ್ಯಮಟ್ಟದ ಕಬಡ್ಡಿ ಆಟಗಾರ ಹೆಬ್ರಿ ತಾಲ್ಲೂಕಿನ ಮುನಿಯಾಲು ಮುಟ್ಲುಪಾಡಿ ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಅವರು ಶುಕ್ರವಾರ ರಾತ್ರಿ ಹೃದಯಘಾತದಿಂದ ನಿಧನರಾದರು.

ಮಂಡ್ಯದ ನಾಗಮಂಗಲದಲ್ಲಿ ಶುಕ್ರವಾರ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಅವರು ಭಾಗವಹಿಸಿದ್ದರು. ಆಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು ಅಲ್ಲೇ ಕುಸಿದು ಬಿದ್ದಿದ್ದರು. ತಕ್ಷಣ ತಂಡದ ಸಹ ಆಟಗಾರರು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ.

ADVERTISEMENT

ಪ್ರೀತಂ ಅವರು ಉದ್ಯೋಗಕ್ಕಾಗಿ ಕೆಲವೇ ದಿನಗಳಲ್ಲಿ ವಿದೇಶಕ್ಕೆ ತೆರಳಲು ತಯಾರಿ ನಡೆಸಿದ್ದರು. ಅವರಿಗೆ ತಾಯಿ ಮತ್ತು ಸಹೋದರ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.