ಉಡುಪಿ: ಸುಪ್ರೀಂ ಕೋರ್ಟ್ ಸೂಚನೆ ಪ್ರಕಾರ ನಗರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಎಲ್ಲೆಂದರಲ್ಲಿ ಆಹಾರ ಹಾಕುವುದನ್ನು ನಿಷೇಧಿಸಲಾಗುತ್ತಿದ್ದು, ಆಹಾರವನ್ನು ಹಾಕುವ ಸ್ಥಳವನ್ನು ನಿಗದಿಪಡಿಸಿ ಫಲಕ ಹಾಕಲಾಗುವುದು ಎಂದು ಪೌರಾಯುಕ್ತ ಮಹೇಶ್ ಹಂಗರಗಿ ತಿಳಿಸಿದರು.
ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಎಬಿಸಿ ಕಾರ್ಯಕ್ರಮವನ್ನು ಸ್ಥಳೀಯ ಎನ್ಜಿಒ ಜೊತೆ ಸೇರಿ ಅನುಷ್ಠಾನಗೊಳಿಸಲಾಗುವುದು ಎಂದರು.
ಪರಿಸರ ಇಂಜಿನಿಯರ್ ರವಿಪ್ರಕಾಶ್ ಮಾತನಾಡಿ, ಮಕ್ಕಳು, ಹಿರಿಯ ನಾಗರಿಕರಿಗೆ ಬೀದಿನಾಯಿಗಳಿಂದ ಬಹಳಷ್ಟು ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಸಲ್ಲಿಕೆಯಾಗಿವೆ ಎಂದರು.
ನಗರಸಭಾ ಸದಸ್ಯ ಗಿರೀಶ್ ಅಂಚನ್ ಮಾತನಾಡಿ, ನಗರಸಭೆ ಸುತ್ತಮುತ್ತ ಎರಡಕ್ಕಿಂತ ಹೆಚ್ಚು ನಾಯಿಗಳನ್ನು ಸಾಕುತ್ತಿರುವವರು ನೋಂದಣಿ ಮಾಡಿಕೊಳ್ಳುವಂತೆ ನಿಯಮ ರೂಪಿಸಬೇಕು ಎಂದು ಸಲಹೆ ನೀಡಿದರು.
ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ರೆಡ್ಡಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ವಿಜಯಕೊಡವೂರು, ಜಿ.ಟಿ. ಹೆಗ್ಡೆ, ಮಂಜುನಾಥ್ ಮಣಿಪಾಲ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.