ಅಮಾನತು
ಉಡುಪಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ನೇಮಕಗೊಂಡಿದ್ದರೂ ನೇಮಕಾತಿ ಆದೇಶ ಸ್ವೀಕರಿಸದ ಕಾರಣಕ್ಕೆ ಬ್ರಹ್ಮಾವರ ಶೆಟ್ಟಿಬೆಟ್ಟು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ವೆಂಕಟೇಶ್ ಪಿ. ಬಿ. ಅವರನ್ನು ಅಮಾನತು ಮಾಡಲಾಗಿದೆ.
ಹಲವು ಬಾರಿ ದೂರವಾಣಿ ಮೂಲಕ ಸಂಪರ್ಕಿಸಿದರೂ ನೇಮಕಾತಿ ಆದೇಶ ಪ್ರತಿಯನ್ನು ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ. ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ಈವರೆಗೂ ನೋಟಿಸ್‌ಗೆ ಸಮಜಾಯಿಷಿ ನೀಡಿಲ್ಲ. ಈ ಕಾರಣಕ್ಕೆ ಅವರನ್ನು ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.