ADVERTISEMENT

ಪಡುಬಿದ್ರಿ| ಉಚ್ಚಿಲ ದಸರಾ: ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2025, 5:40 IST
Last Updated 22 ಸೆಪ್ಟೆಂಬರ್ 2025, 5:40 IST
ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುವ ಉಡುಪಿ - ಉಚ್ಚಿಲ ದಸರಾ 2025ರ ಪ್ರಯುಕ್ತ ವಿದ್ಯುತ್ ದೀಪಾಲಂಕಾರಕ್ಕೆ ಭಾನುವಾರ ಸಂಜೆ ದಸರಾ ರೂವಾರಿ ಡಾ. ಜಿ.ಶಂಕರ್ ಚಾಲನೆ ನೀಡಿದರು
ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುವ ಉಡುಪಿ - ಉಚ್ಚಿಲ ದಸರಾ 2025ರ ಪ್ರಯುಕ್ತ ವಿದ್ಯುತ್ ದೀಪಾಲಂಕಾರಕ್ಕೆ ಭಾನುವಾರ ಸಂಜೆ ದಸರಾ ರೂವಾರಿ ಡಾ. ಜಿ.ಶಂಕರ್ ಚಾಲನೆ ನೀಡಿದರು   

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀಕ್ಷೇತ್ರ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರವರೆಗೆ ನಡೆಯಲಿರುವ ‘ಉಡುಪಿ - ಉಚ್ಚಿಲ ದಸರಾ–25’ರ ಪ್ರಯುಕ್ತ ನಗರಾಲಂಕಾರಕ್ಕಾಗಿ ವಿಶೇಷವಾಗಿ ಜೋಡಿಸಿರುವ ವೈವಿಧ್ಯಮಯ ವಿದ್ಯುತ್ ದೀಪಾಲಂಕಾರಕ್ಕೆ ಭಾನುವಾರ ಸಂಜೆ ಚಾಲನೆ ನೀಡಲಾಯಿತು.

ಉಡುಪಿ–ಉಚ್ಚಿಲ ದಸರಾ ರೂವಾರಿ ಡಾ. ಜಿ.ಶಂಕರ್ ಕಾರ್ಯಕ್ರಮ ಉದ್ಘಾಟಿಸಿದರು. ಶ್ರೀಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ, ದೇವಸ್ಥಾನದ ರಥಬೀದಿ, ಶಾಲಿನಿ ಜಿ. ಶಂಕರ್ ತೆರೆದ ವೇದಿಕೆಯಲ್ಲಿ ಮತ್ತು ಶಾರದಾ ಮೂರ್ತಿಯನ್ನು ನವದುರ್ಗೆಯರು ಪ್ರತಿಷ್ಠಾಪಿಸುವ ದಸರಾ ಮಂಟಪ ಹಾಗೂ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಿಂದ ಪಡುಬಿದ್ರಿಯವರೆಗೆ, ಪಡುಬಿದ್ರಿಯಿಂದ ಕಾಪುವಿನವರೆಗೆ, ಕೊಪ್ಪಲಂಗಡಿಯಿಂದ ಕಾಪು ಬೀಚ್ವರೆಗೆ ರಸ್ತೆಯುದ್ದಕ್ಕೂ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಎಲ್ಲಾ ದೀಪಗಳನ್ನೂ ಭಾನುವಾರ ಸಂಜೆ ಏಕಕಾಲದಲ್ಲಿ ಉದ್ಘಾಟಿಸಲಾಯಿತು.

ಈ ಸಂದರ್ಭ ಶಾಸಕ ಯಶ್‌ಪಾಲ್‌ ಸುವರ್ಣ, ಮುಖಂಡ ವಿನಯ್‌ಕುಮಾರ್ ಸೊರಕೆ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಸುವರ್ಣ ಬೆಳ್ಳಂಪಳ್ಳಿ, ಉಪಾಧ್ಯಕ್ಷರಾದ ಮೋಹನ್ ಬೇಂಗ್ರೆ, ದಿನೇಶ್ ಎರ್ಮಾಳು, ಕಾರ್ಯದರ್ಶಿ ಶರಣ್ಕುಮಾರ್ ಮಟ್ಟು, ಕ್ಷೇತ್ರಾಡಳಿಯ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಉಚ್ಚಿಲ ದಸರಾ ಉತ್ಸವ ಸಮಿತಿಯ ಅಧ್ಯಕ್ಷ ವಿನಯ ಕರ್ಕೇರ, ಮಹಿಳಾ ಸಂಚಾಲಕಿ ಸಂಧ್ಯಾದೀಪ ಸುನಿಲ್, ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಉದ್ಯಮಿ ಸಾಧು ಸಾಲ್ಯಾನ್, ಶ್ರೀಪತಿ ಭಟ್, ಉಷಾ ರಾಣಿ ಮಂಗಳೂರು, ಮನೋಜ್ ಕಾಂಚನ್, ಸುಜಿತ್ ಸಾಲ್ಯಾನ್, ಸತೀಶ್ ಕಾಂಚನ್, ಶಿವಕುಮಾರ್ ಮೆಂಡನ್, ಸುಗುಣ ಕರ್ಕೇರ ಮತ್ತು ದೇವಳದ ಪ್ರಧಾನ ವ್ಯವಸ್ಥಾಪಕ ಸತೀಷ್ ಅಮೀನ್ ಪಡುಕರೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.