
ಪ್ರಜಾವಾಣಿ ವಾರ್ತೆ
ಉಡುಪಿ: ಸೌರ ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಉಡುಪಿಯ ಕೃಷ್ಣಮಠದಲ್ಲಿ ಸೋಮವಾರ ವಿಟ್ಲಪಿಂಡಿ ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು.
ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಕೃಷ್ಣನ ಮೃಣ್ಮಯ (ಮಣ್ಣಿನ) ಮೂರ್ತಿಗೆ ಷೋಡಷೋಪಚಾರ ಪೂಜೆ ಮಾಡಿ, ನಂತರ ಮಹಾಪೂಜೆ ನೆರವೇರಿಸಿದರು. ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಮೃಣ್ಮಯ ಉತ್ಸವ ಮೂರ್ತಿಯನ್ನು ಚಿನ್ನದ ಪಲ್ಲಕ್ಕಿಯಲ್ಲಿ ಕೂರಿಸಿ, ರಥಬೀದಿಗೆ ತರಲಾಯಿತು.
ಬಳಿಕ ಪರ್ಯಾಯ ಶ್ರೀಪಾದರು ಆರತಿ ಬೆಳಗುವ ಮೂಲಕ ಚಿನ್ನದ ರಥೋತ್ಸವಕ್ಕೆ ಚಾಲನೆ ನೀಡಿದರು. ಇದೇ ವೇಳೆ ಗೊಲ್ಲ ವೇಷಧಾರಿಗಳು ರಥಬೀದಿಯ ಗುರ್ಜಿಗಳಲ್ಲಿ ಕಟ್ಟಿದ್ದ ಮೊಸರು ಕುಡಿಕೆಗಳನ್ನು ಒಡೆದರು.
ಮೆರವಣಿಗೆಯಲ್ಲಿ ಜನಪದ ಹುಲಿವೇಷಗಳು ಹಾಗೂ ಇತರ ವೇಷಗಳು ಗಮನ ಸೆಳೆದವು. ಸಾವಿರಾರು ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.