ಉಡುಪಿ: ಉಡುಪಿಯ ಶಿರಿಯಾರದವರಾದ ಯಕ್ಷಗಾನ ಕಲಾವಿದ ಜಂಬೂರು ರಾಮಚಂದ್ರ ಶಾನುಭಾಗ್ (84) ಭಾನುವಾರ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರರು , ಓರ್ವ ಪುತ್ರಿ ಇದ್ದಾರೆ.
ಮಂದಾರ್ತಿ, ಮಾರಣಕಟ್ಟೆ, ಅಮೃತೇಶ್ವರಿ, ಇಡಗುಂಜಿ, ಪೆರ್ಡೂರು, ಹಾಲಾಡಿ, ಗುಂಡುಬಾಳ, ಕಮಲಶಿಲೆ ಮೇಳದಲ್ಲಿ ಐದೂವರೆ ದಶಕಗಳ ಕಾಲ ಕಲಾಸೇವೆಗೈದಿದ್ದರು ರಾಮಚಂದ್ರ ಶಾನುಭಾಗ್.
ಉಡುಪಿಯ ಯಕ್ಷಗಾನ ಕಲಾರಂಗ ಸೇರಿದಂತೆ ಹಲವು ಸಂಸ್ಥೆಗಳು ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.